Accident ಹುನಗುಂದ ಹೈವೇಯಲ್ಲಿ ಅಪಘಾತ ಕಾರಿನಲ್ಲಿದ್ದ ಓರ್ವವ್ಯಕ್ತಿ ಸ್ಥಳದಲ್ಲಿಯೇ ಸಾವು : ಇಬ್ಬರಿಗೆ ಗಂಭೀರ ಗಾಯ
ಬಾಗಲಕೋಟ ಜಿಲ್ಲೆಯ ಹುನಗುಂದ ಪಟ್ಟಣದ ರಾಷ್ಟಿçÃಯ ಹೆದ್ದಾರಿ ೫೦ ರಲ್ಲಿ ನಡೆದ ಕಾರು ಮತ್ತು ವಿಆರ್‌ಎಲ್ ಬಸ್ ಮುಖಾಮುಖಿ ಅಪಘಾತದಲ್ಲಿ ಕಾರಿನಲ್ಲಿದ್ದ ಕೊಪ್ಪಳ ಜಿಲ್ಲೆಯ ಇಂದ್ರಾನಗರ ಎಲ್‌ಟಿಯ ಪುಟ್ಟ ಹನಮಂತ ಕಾರಾಬಾರಿ (೨೬) ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಗುರುವಾರದಂದು ರಾತ್ರಿ ೧೨ ಗಂಟೆಗೆ ನಡೆದಿದೆ.
ವಿಡಿಯೋ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ
ಇದರಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು ಅವರನ್ನು ಜಿಲ್ಲಾ ಆಸ್ಪತ್ರೆಗೆ ಸೇರಿಸಲಾಗಿದೆ. ಸ್ಥಳಕ್ಕೆ ಆಗಮಿಸಿ ಕರವೇ ಪದಾಧಿಕಾರಿಗಳು ಹೆದ್ದಾರಿ ಪ್ರಾಧಿಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಇಂತಹ ಸಾವುಗಳು ನಡೆಯುವದ್ದಕ್ಕೆ ಹೆದ್ದಾರಿ ಅಧಿಕಾರಿಗಳೇ ಕಾರಣ ಎಂದು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಸುಮಾರು ಒಂದು ಗಂಟೆಗಳ ಕಾಲ ಶವವನ್ನು ಇಟ್ಟುಕೊಂಡು ಪ್ರತಿಭಟನೆಯನ್ನು ನಡೆಸಿದರೂ ಯಾವುದೇ ಅಧಿಕಾರಿ ಸ್ಥಳಕ್ಕೆ ಭೇಟಿ ನೀಡಿಲ್ಲ ಎಂದು ಅಧ್ಯಕ್ಷ ಶರಣು ಗಾಣಿಗೇರ ಆರೋಪಿಸಿದ್ದಾರೆ.
ಘಟನಾ ಸ್ಥಳಕ್ಕೆ ಸಿಪಿಐ ಸುನೀಲ ಸವದಿ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.
ವರದಿ : ಭೀಮಣ್ಣ ಗಾಣಿಗೇರ (ಇಳಕಲ್ಲ)