
ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಬಂದ ವಿದ್ಯಾರ್ಥಿನಿಗೆ ವೀಣಾ ಕಾಶಪ್ಪನವರಿಂದ ಸತ್ಕಾರ
೨೦೨೪ ರ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಬಂದ ಬಾಗಲಕೋಟ ಜಿಲ್ಲೆಯ ಮುಧೋಳ ತಾಲೂಕಿನ ವಜ್ಜರಮಟ್ಟಿ ಗ್ರಾಮದ ವಿದ್ಯಾರ್ಥಿನಿ ಅಂಕಿತಾ ಬಸಪ್ಪ ಕೊಣ್ಣೂರು ವಿದ್ಯಾರ್ಥಿನಿಯನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ವೀಣಾ ಕಾಶಪ್ಪನವರ ಶನಿವಾರದಂದು ವಿದ್ಯಾರ್ಥಿನಿಯ ಮನೆಗೆ ತೆರಳಿ ಸಿಹಿ ತಿನ್ನಿಸುವ ಮೂಲಕ ಶುಭ ಹಾರೈಸಿ ಸತ್ಕರಿಸಿ ಗೌರವಿಸಿದರು.
ಅದೇ ರೀತಿ ಮುಧೋಳ ನಗರದ ಕವಿ ರನ್ನ ವಸತಿ ಶಾಲೆಯಲ್ಲಿ ಓದಿ, ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ೬೨೫ ಕ್ಕೆ ೬೨೨ ಅಂಕಗಳನ್ನು ಪಡೆದುಕೊಂಡು ರಾಜ್ಯಕ್ಕೆ ೪ ನೇ ಸ್ಥಾನ ಪಡೆದುಕೊಂಡಿರುವ ಮುಧೋಳ ತಾಲ್ಲೂಕಿನ ಆಲಗುಂಡಿ ಬಿಕೆ ಗ್ರಾಮದ ವಿದ್ಯಾರ್ಥಿನಿ ಸೃಷ್ಟಿ ರವಿಕುಮಾರ ಹಂಚಾಟೆ ಅವರ ಮನೆಗೆ ಭೇಟಿ ನೀಡಿ ಅವರನ್ನು ಸನ್ಮಾನಿಸಿ ಸತ್ಕರಿಸಿರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಹಾಗೂ ಪಿಕೆಪಿಸ್ ಸದಸ್ಯರುಗಳು ಮತ್ತು ಗ್ರಾಮದ ಗುರು ಹಿರಿಯರು ಹಾಗೂ ಯುವಕ ಮಿತ್ರರು ಉಪಸ್ಥಿತರಿದ್ದರು.
ವರದಿ ಭೀಮಣ್ಣ ಗಾಣಿಗೇರ (ಇಳಕಲ್ಲ) ವಿಡಿಯೋ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ