ಫೇಲಾದ ವಿದ್ಯಾರ್ಥಿಗಳಿಗೆ ತರಬೇತಿಗೆ ಕ್ರಮ
ಇಳಕಲ್ : ಎಪ್ರಿಲ್ ನಲ್ಲಿ ನಡೆದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಫೇಲಾದ ವಿದ್ಯಾರ್ಥಿಗಳಿಗೆ ಸರಕಾರದ ವತಿಯಿಂದ ನೀಡಲಾಗುವ ತರಬೇತಿಯಲ್ಲಿ ಪಾಲ್ಗೊಳ್ಳಲು ಮನವೊಲಿಸಲು ಕ್ಷೇತ್ರ ಶಿಕ್ಷಣಾಧಿಕಾರಿಗಳು ಮನೆ ಮನೆ ಅಡ್ಡಾಡಿದರು.
ಫೇಲಾದ ವಿದ್ಯಾರ್ಥಿಗಳಿಗೆ ತರಬೇತಿಯನ್ನು ನೀಡಲು ಶಿಕ್ಷಣ ಇಲಾಖೆಯ ವತಿಯಿಂದ ಕ್ರಮ ಕೈಗೊಳ್ಳಲಾಗಿದೆ ಆದರೆ ಅದರಲ್ಲಿ ಪಾಲ್ಗೊಳ್ಳಲು ವಿದ್ಯಾರ್ಥಿಗಳು ಹಿಂದೇಟು ಹಾಕುತ್ತಿದ್ದು ತಾಲೂಕಿನ ಚಿಕ್ಕಕೊಡಗಲಿ ತಾಂಡವ ವಿದ್ಯಾರ್ಥಿಗಳನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಜಾಸ್ಮಿನ್ ಕಿಲ್ಲೇದಾರ ಗುರುವಾರ ಸಾಯಂಕಾಲ ತಾಂಡಾಕ್ಕೆ ಭೇಟಿ ನೀಡಿ ಮನೆ ಮನೆಗಳಿಗೆ ಸಂಚರಿಸಿ ಪಾಲಕರನ್ನು ಭೇಟಿ ಮಾಡುವ ಜೊತೆಗೆ ವಿದ್ಯಾರ್ಥಿಗಳ ಮನವೊಲಿಸಿ ಅದರಲ್ಲಿ ಯಶಸ್ವಿಯಾದರು.
ಚಿಕ್ಕಕೊಡಗಲಿ ಗ್ರಾಮದ ಸರಕಾರಿ ಪ್ರಾಥಮಿಕ ಶಾಲೆಯಲ್ಲಿಯೇ ತರಬೇತಿಗಾಗಿ ವ್ಯವಸ್ಥೆ ಮಾಡಿ ಕೊಡಲಾಯಿತು. ಈ ಸಮಯದಲ್ಲಿ ಅವರ ಜೊತೆಗೆ ತಾಲೂಕಿನ ದೈಹಿಕ ನಿರ್ದೇಶಕ ಎಸ್ ಟಿ ಪೈಲ್ , ಹಿರೇಕೊಡಗಲಿ ಹೈಸ್ಕೂಲ್ ಮುಖ್ಯ ಗುರು ಡಿ ಎಸ್ ಅಂಗಡಿ ,ರೇಶ್ಮಿ ಗುರುಗಳು ಉಪಸ್ಥಿತರಿದ್ದರು.