ಪ್ರತಿಭೆಗೆ ಪ್ರೋತ್ಸಾಹ ಇದ್ದಾಗ ಮಾತ್ರ ಸಾಧನೆ ಮಾಡಲು ಸಾಧ್ಯ: ಅಂಕಿತಾ
ಬಾಗಲಕೋಟೆ ಜಿಲ್ಲಾ ಪಂಚಾಯತ ನೂತನ ಸಭಾಭವನದಲ್ಲಿ ಶನಿವಾರ ಗ್ರಾಮೀಣ ಅಭಿವೃದ್ದಿ ಮತ್ತು ಪಂಚಾಯತ ರಾಜ್ ಇಲಾಖೆ ಹಾಗೂ ಪಂಚಾಯತಿ ಅಭಿವೃದ್ದಿ ಅಧಿಕಾರಿಗಳ ಕ್ಷೇಮಾಭಿವೃದ್ದಿ ಸಂಘದ ವತಿಯಿಂದ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಅಂಕಿತಾಗೆ ಸನ್ಮಾನಿಸಿ ಗೌರವಿಸಲಾಯಿತು.
ನಂತರ ಮಾತನಾಡಿದ ಅಂಕಿತಾ, ನನ್ನ ಶ್ರಮದ ಜೊತೆ ಕುಟುಂಬ, ಶಾಲಾ ಶಿಕ್ಷಕರು ಹಾಗೂ ಸಮಾಜ ಕಲ್ಯಾಣ ಇಲಾಖೆಯ ತುಂಬು ಸಹಕಾರ ಇದ್ದುದರಿಂದ ಈ ಸಾಧನೆ ಮಾಡಲು ಸಾಧ್ಯವಾಯಿತು ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ವಿದ್ಯಾರ್ಥಿನಿಯ ತಂದೆ ತಾಯಿಯನ್ನು ಸತ್ಕರಿಸಲಾಯಿತು. ಈ ಸಮಯದಲ್ಲಿ ಜಿಲ್ಲಾಧಿಕಾರಿ ಕೆ.ಎಂ.ಜಾನಕಿ, ಜಿಲ್ಲಾ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಮತ್ತು ಜಿಲ್ಲಾ ಆಡಳಿತದ ಅಧಿಕಾರಿಗಳು ಉಪಸ್ಥಿತರಿದ್ದರು.