ಜೂನ್ ೨೭ ರಂದು ಇಳಕಲ್ದಲ್ಲಿ ಜನಸ್ಪಂದನ ಸಭೆ
ಬಾಗಲಕೋಟ ಜಿಲ್ಲೆಯ ಇಳಕಲ್ದ ತಹಸೀಲ್ದಾರ ಕಚೇರಿಯಲ್ಲಿ ಜೂನ್ ೨೭ ಗುರುವಾರದಂದು ಜನಸ್ಪಂದನ ಸಭೆ ಏರ್ಪಡಿಸಲಾಗಿದೆ ಎಂದು ತಹಸೀಲ್ದಾರ ಸತೀಶ್ ಕೂಡಲಗಿ ತಿಳಿಸಿದ್ದಾರೆ.
ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷ ಶಾಸಕ ವಿಜಯಾನಂದ ಕಾಶಪ್ಪನವರ ಅಧ್ಯಕ್ಷತೆಯಲ್ಲಿ ನಡೆಯುವ ಜನಸಂಪರ್ಕ ಸಭೆಯಲ್ಲಿ
ಬಾಗಲಕೋಟೆ ಜಿಲ್ಲಾಧಿಕಾರಿ ಕೆ ಎಂ ಜಾನಕಿ ,ಜಿಲ್ಲಾ ಪಂಚಾಯತಿ ಕಾರ್ಯನಿರ್ವಾಹಕ ಶಶಿಧರ ಕುರೇರ, ಬಾಗಲಕೋಟೆ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ ಮತ್ತು ಅಧಿಕಾರಿಗಳು ಭಾಗವಹಿಸಲಿದ್ದಾರೆ.
ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಅವರು ಹೇಳಿದ್ದಾರೆ.






