ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ನ್ಯಾಕ್ ಬಿ ಮಾನ್ಯತೆ
ಇಳಕಲ್ : ಇಲ್ಲಿನ ಸರಕಾರಿ ಪ್ರಥಮ ದರ್ಜೆ ಬಿಎ ಬಿಕಾಂ ಬಿಬಿಎ ಮತ್ತು
ಬಿಎಸ್ ಸಿ ಕಾಲೇಜಿಗೆ ನ್ಯಾಕ್ ಸಮಿತಿ ಬಿ ಮಾನ್ಯತೆಯನ್ನು ನೀಡಿದೆ.
ಇದರ ಪ್ರಮಾಣಪತ್ರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉನ್ನತ
ಶಿಕ್ಷಣ ಸಚಿವ ಎಂ ಸಿ ಸುಧಾಕರ ಗುರುವಾರದಂದು ಬೆಂಗಳೂರಿನಲ್ಲಿ ನಡೆದ
ಸಮಾರಂಭದಲ್ಲಿ ಪ್ರಾಚಾರ್ಯ ಎಂ ಎಚ್ ತಹಸೀಲ್ದಾರ ಅವರಿಗೆ ನೀಡಿದರು.