Kandagalla village ಕಂದಗಲ್ಲ ಗ್ರಾಮದಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದ ಶಾಸಕ ಕಾಶಪ್ಪನವರ
ಇಳಕಲ್: ೨೦೨೨-೨೩ ನೇ ಸಾಲಿನ ಮುಖ್ಯಮಂತ್ರಿಗಳ ಪರಿಹಾರ ನಿಧಿ, ಪ್ರಕೃತಿ ವಿಕೋಪ ನಿಧಿಯಡಿ ಸಂಗ್ರಹವಾದ
ಅನುದಾನದಿ ಹಾಗೂ ಹುನಗುಂದ ಮತಕ್ಷೇತ್ರ ಮಂಜೂರಾತಿ ನೀಡಿದ ರಸ್ತೆ ಕಾಮಗಾರಿ ಯೋಜನೆಯಡಿ ಕಂದಗಲ್ಲ
ಗ್ರಾಮದ ಡಾ.ಬಿ.ಆರ್.ಅಂಬೇಡ್ಕರ ವೃತ್ತದಿಂದ ಬಸ್ ನಿಲ್ದಾಣದ ವರೆಗೆ ಬಸ್ ನಿಲ್ದಾಣದಿಂದ ರಾಣಿ ಚನ್ನಮ್ಮ ವೃತ್ತದ
ವರೆಗೆ ಸಿಸಿ ರಸ್ತೆ ಕಾಮಗಾರಿಗೆ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷ ಶಾಸಕ ವಿಜಯಾನಂದ ಕಾಶಪ್ಪನವರ
ಶನಿವಾರದಂದು ಭೂಮಿ ಪೂಜೆಯನ್ನು ನೆರವೇರಿಸಿದರು.
ಈ ಸಮಯದಲ್ಲಿ ಮಾತನಾಡಿದ ಅವರು ೨೮೫ ಲಕ್ಷ ರೂ ವೆಚ್ಚದಲ್ಲಿ ಸಿಸಿ ರಸ್ತೆ ಕಾಮಗಾರಿಯನ್ನು ಮಾಡಲಾಗುತ್ತಿದೆ.
ಗ್ರಾಮಕ್ಕೆ ನೀರಾವರಿ ಸೌಲಭ್ಯವನ್ನು ಒದಗಿಸಲಾಗುವದು, ಗ್ರಾಮದಲ್ಲಿ ೫೦ ಲಕ್ಷರೂ ವೆಚ್ಚದಲ್ಲಿ ಅಂಬೇಡ್ಕರ ಭವನವನ್ನು
ನಿರ್ಮಾಣ ಮಾಡಿಕೊಡುತ್ತೇನೆ ಎಂದು ಭರವಸೆಯನ್ನು ನೀಡಿದರು.
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ ಅಧ್ಯಕ್ಷ ಬಸವರಾಜ ಅಳ್ಳೋಳ್ಳಿ, ಪ್ರಗತಿಪರ ರೈತ ಚನ್ನಪ್ಪಗೌಡ ನಾಡಗೌಡ,
ತಾಲೂಕಾ ಪಂಚಾಯ ಮಾಜಿ ಅಧ್ಯಕ್ಷ ಮಹಾಂತೇಶ ಕಡಿವಾಲ, ಮಾಜಿ ಗ್ರಾ,ಪಂ, ಅಧ್ಯಕ್ಷ ಮಹಮ್ಮದಸಾಬ ಭಾವಿಕಟ್ಟಿ,
ಅಮರೇಶ ಕೊಡಕೇರಿ, ರವಿ ಗಾಣಿಗೇರ, ದಸಗೀರ ಸಾಬ, ಸಂಗಣ್ಣ ಹವಲ್ದಾರ ಮತ್ತಿತರರು ಉಪಸ್ಥಿತರಿದ್ದರು.
ಗ್ರಾಮಸ್ಥರಿಂದ ಶಾಸಕರಿಗೆ ಮನವಿ : ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಮಾಡಿಸುವಂತೆ ೧೦ ಪ್ರಮುಖ
ಬೇಡಿಕೆಗಳನ್ನು ಈಡೇರಿಸುವಂತೆ ಗ್ರಾಮದ ಮುಖಂಡರು ಶಾಸಕ ವಿಜಯಾನಂದ ಕಾಶಪ್ಪನವರಿಗೆ ಮನವಿಯನ್ನು ನೀಡಿದರು.
ಮನವಿ ಸ್ವೀಕರಿಸಿ ಮಾತನಾಡಿದ ಶಾಸಕರು ಆದಷ್ಟು ಬೇಗನೆ ನಿಮ್ಮ ಬೇಡಿಕೆಗಳನ್ನು ಈಡೇರಿಸುತ್ತೇನೆ ಎಂದು ಹೇಳಿದರು.