meeting ಪುನರ್ವಸತಿ ಪುನರ್ ನಿರ್ಮಾಣ ಹಾಗೂ
ಭೂಸ್ವಾಧೀನ ವಿಷಯಗಳ ಪ್ರಗತಿ ಪರಿಶೀಲನಾ ಸಭೆ
ಬಾಗಲಕೋಟೆ : ಜಿಲ್ಲಾ ಪಂಚಾಯತ್ ನೂತನ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ ರವರ ಅಧ್ಯಕ್ಷತೆಯಲ್ಲಿ ಪುನರ್ವಸತಿ ಪುನರ್ ನಿರ್ಮಾಣ ಹಾಗೂ ಭೂಸ್ವಾಧೀನ ವಿಷಯಗಳ ಪ್ರಗತಿ ಪರಿಶೀಲನಾ ಸಭೆ ಬುಧವಾರದಂದು ಜರುಗಿತು.
ಈ ಸಂದರ್ಭದಲ್ಲಿ ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಹುನಗುಂದ ಶಾಸಕ ವಿಜಯಾನಂದ ಎಸ್ ಕಾಶಪ್ಪನವರ ಅವರು ಭಾಗವಹಿಸಿ ಪುನರ್ವಸತಿ ಕೇಂದ್ರಗಳ ಮೂಲಭೂತ ಸೌಲಭ್ಯಗಳ ಕುರಿತು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಕೆ.ಎಂ.ಜಾನಕಿ, ಜಿಲ್ಲಾ ಸಿಇಓ ಶಶಿಧರ ಕುರೇರ, ಬಾಗಲಕೋಟ ಶಾಸಕ ಎಚ್,ವಾಯ್,ಮೇಟಿ, ಬೀಳಗಿ ಶಾಸಕ ಜೆ,ಟಿ,ಪಾಟೀಲ ಜಮಖಂಡಿ ಶಾಸಕ ಜಗದೀಶ ಗುಡಗುಂಟಿ, ವಿಧಾನ ಪರಿಷತ್ತ ಸದಸ್ಯ ಪಿ.ಎಚ್.ಪೂಜಾರ ಮತ್ತು ಸಂಬAಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.