Indira Canteen ಇಂದಿರಾ ಕ್ಯಾಂಟಿನ್ ನಿರ್ಮಾಣಕ್ಕೆ ಶಾಸಕರಿಂದ ಭೂಮಿ ಪೂಜೆ
ಇಳಕಲ್ಲ. ತಾಲೂಕಿಗೊಂದು ಇಂದಿರಾ ಕ್ಯಾಂಟೀನ್ ನಿರ್ಮಿಸಿ ಬಡಜನರಿಗೆ ಶುದ್ದ ಆಹಾರ ಒದಗಿಸುವದು ಮುಖ್ಯಮಂತ್ರಿ ಸಿದ್ದರಾಮಯ್ಯ ಕನಸು ಆಗಿದೆ ಎಂದು ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷ ಶಾಸಕ ವಿಜಯಾನಂದ ಕಾಶಪ್ಪನವರ ಹೇಳಿದರು.
ನಗರದ ಪೋಲಿಸ್ ಠಾಣೆಯ ಬಯಲಿನಲ್ಲಿ ನೂತನವಾಗಿ ನಿರ್ಮಿಸಲಾಗುತ್ತಿರುವ ಇಂದಿರಾ ಕ್ಯಾಂಟೀನ್ ಕ್ಕೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು ಈಗಾಗಲೇ ಹುನಗುಂದದಲ್ಲಿ ಇಂದಿರಾ ಕ್ಯಾಂಟೀನ್ ಕಾರ್ಯ ನಿರ್ವಹಿಸುತ್ತಿದ್ದು ಇಳಕಲ್ ದಲ್ಲಿ ಇಂದು ಭೂಮಿಪೂಜೆ ನೆರವೇರಿಸಿದ್ದೇವೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ನಗರಸಭೆಯ ಸದಸ್ಯರಾದ ಸುಧಾರಾಣಿ ಸಂಗಮ , ಆಫ್ರೀನ , ಅಮೃತ ಬಿಜ್ಜಳ, ಮೌಲಪ್ಪ ಬಂಡಿವಡ್ಡರ, ನಾಮ ನಿರ್ದೇಶಿತ ಸದಸ್ಯರಾದ ಅಬ್ಬು ಹಳ್ಳಿ, ರಾಧೇಶ್ಯಾಮ ದರಕ ಮಲ್ಲು ಮಡಿವಾಳರ ಯಲ್ಲಪ್ಪ ರಾಜಾಪೂರ , ಮಾಗನೂರ, ಪೌರಾಯುಕ್ತ ಶ್ರೀನಿವಾಸ ಜಾಧವ ಸೇರಿದಂತೆ ನಗರಸಭೆಯ ಸಿಬ್ಬಂದಿ ಮತ್ತಿತರರು ಉಪಸ್ಥಿತರಿದ್ದರು.
ವರದಿ: ಭೀಮಣ್ಣ ಗಾಣಿಗೇರ (ಇಳಕಲ್ಲ)