BJP leader ಮಾಜಿ ವಿಧಾನಸಭಾ ಪರಿಷತ್ ಸದಸ್ಯ ಬಿಜೆಪಿ ನಾಯಕ ಎಂ. ಬಿ. ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ
ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಬಿಜೆಪಿ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವೇಳೆ ಬಿಜೆಪಿ ನಾಯಕಬಾನು ಭಾನುಪ್ರಕಾಶ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
“ಅವರು ಪ್ರತಿಭಟನೆಯಲ್ಲಿ ಹೃದಯಾಘಾತದಿಂದ ಕುಸಿದುಬಿದ್ದರು” ಎಂದು ಪೊಲೀಸ್ ಮೂಲವೊಂದು ತಿಳಿಸಿದೆ. “ಅವರನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಆದರೆ ಅವರನ್ನು ಉಳಿಸಲು ಸಾಧ್ಯವಾಗಲಿಲ್ಲ” ಎಂದು ಮೂಲಗಳು ತಿಳಿಸಿವೆ.
ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ. ವೈ. ವಿಜಯೇಂದ್ರ ಮಾತನಾಡಿ, ಭಾನುಪ್ರಕಾಶ್ ಅವರ ಅಕಾಲಿಕ ನಿಧನದಿಂದ ತೀವ್ರ ಆಘಾತವಾಗಿದೆ.”ಭಾನುಪ್ರಕಾಶ್ ಅವರು ತಮ್ಮ ಕೊನೆಯ ಉಸಿರಿರುವವರೆಗೂ ಬಿಜೆಪಿಗಾಗಿ ಕೆಲಸ ಮಾಡಿದರು. ಅವರ ನಿಧನದಿಂದ ಪಕ್ಷಕ್ಕೆ ಅಪಾರ ನಷ್ಟವಾಗಿದೆ “ಎಂದು ಹೇಳಿದರು.
ಬಿಜೆಪಿ ಕಾರ್ಯಕ್ರಮದಲ್ಲೇ ಕಾರ್ಯಕರ್ತರ ಮಧ್ಯೆ ಕೊನೆ ಉಸಿರೇಳೆದ ಬಾನು ಭಾನುಪ್ರಕಾಶ್ ಅವರ ಅಂತ್ಯಸಂಸ್ಕಾರ ಸಂಜೆ ಮತ್ತೂರಿನ ಸ್ವಗ್ರಾಮದಲ್ಲಿ ನೆರವೇರಲಿದೆ.