ಮತದಾನ ಜಾಗೃತಿ ಅಭಿಯಾನ ಜಾಥಾಕ್ಕೆ ಚಾಲನೆ ನೀಡಿದ ಬಾಗಲಕೋಟ ಜಿಲ್ಲಾಧಿಕಾರಿ ಹಾಗೂ ಚುನಾವಣಾಧಿಕಾರಿ ಜಾನಕಿ ಕೆ.ಎಂ.
ಜಿಲ್ಲಾಡಳಿತ ಬಾಗಲಕೋಟ, ಜಿಲ್ಲಾ ಸ್ವೀಪ್ ಸಮಿತಿ, ಹುನಗುಂದ ತಾಲೂಕು ಸ್ವೀಪ್ ಸಮಿತಿ ಸಹಯೋಗದಲ್ಲಿ ಹುನಗುಂದ ಪಟ್ಟಣದ ಮಿನಿ ವಿಧಾನಸೌಧ ಆವರಣದ ಮುಂದೆ ಶುಕ್ರವಾರದಂದು ಮತದಾನ ಜಾಗೃತಿ ಅಭಿಯಾನ ಜಾಥಾಕ್ಕೆ ಬಾಗಲಕೋಟ ಜಿಲ್ಲಾಧಿಕಾರಿ ಹಾಗೂ ಚುನಾವಣಾಧಿಕಾರಿ ಜಾನಕಿ ಕೆ.ಎಂ. ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.
ಈ ಸಮಯದಲ್ಲಿ ಎಸ್‌ಪಿ ಅಮರನಾಥ ರೆಡ್ಡಿ, ಜಿಪಂ ಸಿಇಒ ಶಶಿಧರ ಕುರೇರ, ಶ್ರೀಧರ ಗೊಟೂರ,ತಹಸೀಲ್ದಾರ ನಿಂಗಪ್ಪ ಬಿರಾದರ, ಸಿಪಿಐ ಸುನೀಲ ಸವದಿ, ತಾಪಂ ಇಒ ಮುರಳೀಧರ ದೇಶಪಾಂಡೆ, ಪುರಸಭೆ ಮುಖ್ಯಾಧಿಕಾರಿ ಪಿ.ಕೆ.ಗುಡದಾರಿ ಸೇರಿದಂತೆ ಇತರರು ಇದ್ದರು.