Celebration of Adikavi Maharshi Valmiki Jayanti at the Ilkal BJP office ಇಳಕಲ್ ಬಿಜೆಪಿ ಕಚೇರಿಯಲ್ಲಿ ಆದಿಕವಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

WhatsApp Group Join Now
Telegram Group Join Now
Instagram Group Join Now
Spread the love

Celebration of Adikavi Maharshi Valmiki Jayanti at the Ilkal BJP office ಇಳಕಲ್ ಬಿಜೆಪಿ ಕಚೇರಿಯಲ್ಲಿ ಆದಿಕವಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

Maharshi Valmiki Jayanti  ಇಳಕಲ್ ಬಿಜೆಪಿ ಕಚೇರಿಯಲ್ಲಿ ಆದಿಕವಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

ಇಳಕಲ್: ಇಲ್ಲಿನ ಬಿಜೆಪಿ ಕಾರ್ಯಾಲಯದಲ್ಲಿ ಆದಿಕವಿ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಭಕ್ತಿಪೂರ್ವಕವಾಗಿ ಹಾಗೂ ಸರಳವಾಗಿ ಆಚರಿಸಲಾಯಿತು.                                                                            ಕಾರ್ಯಕ್ರಮದ ಆರಂಭದಲ್ಲಿ ಮಾಜಿ ಶಾಸಕ ದೊಡ್ಡನಗೌಡ ಪಾಟೀಲ ಮಹರ್ಷಿ ವಾಲ್ಮೀಕಿಯವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಮಾಲಾರ್ಪಣೆ ಮಾಡಿ ಪುಷ್ಪ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, “ರಾಮಾಯಣ ಮಹಾಕಾವ್ಯದ ಕರ್ತೃ ಆದಿಕವಿ ವಾಲ್ಮೀಕಿಯವರ ಜೀವನ ಆದರ್ಶಪ್ರಾಯವಾದದ್ದು. ಸತ್ಯ, ಧರ್ಮ, ಭ್ರಾತೃತ್ವ ಮತ್ತು ಸಾಮಾಜಿಕ ನ್ಯಾಯದ ಸಂದೇಶವನ್ನು ಜಗತ್ತಿಗೆ ಸಾರಿದ ಅವರ ಬದುಕು ಹಾಗೂ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಅವರ ಆದರ್ಶಗಳು ಇಂದಿನ ಸಮಾಜಕ್ಕೆ ಎಂದಿಗೂ ದಾರಿದೀಪ” ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ನಗರಸಭೆ ಮಾಜಿ ಸದಸ್ಯ ಮಂಜುನಾಥ ಹೊಸಮನಿ, ಮಹಾಂತಗೌಡ ಪಾಟೀಲ ತೊಂಡಿಹಾಳ, ಮುದಿಯಪ್ಪ ಪೂಜಾರಿ, ವಿಜಯ ಜಾಲಗಾರ, ವೀರೇಶ ಸೇರಿದಂತೆ ಸಮಾಜದ ಮುಖಂಡರು ಉಪಸ್ಥಿತರಿದ್ದು ಗೌರವ ನಮನ ಸಲ್ಲಿಸಿದರು. ವರದಿ: ಭೀಮಣ್ಣ ಗಾಣಿಗೇರ ಇಳಕಲ್ಲ


Spread the love

Leave a Comment

error: Content is protected !!