Darshan-Renuka Swamy case should be probed in a transparent manner: Actor Upendra ದರ್ಶನ್ – ರೇಣುಕಾ ಸ್ವಾಮಿ ಕೇಸ್ – ಪಾರದರ್ಶಕ ವಿಚಾರಣೆಯಾಗಬೇಕು – ನಟ ಉಪ್ಪೇಂದ್ರ್ 

WhatsApp Group Join Now
Telegram Group Join Now
Instagram Group Join Now
Spread the love

Darshan-Renuka Swamy case should be probed in a transparent manner: Actor Upendra

Darshan-Renuka Swamy ದರ್ಶನ್ – ರೇಣುಕಾ ಸ್ವಾಮಿ -ಕೇಸ್  ಪಾರದರ್ಶಕ ವಿಚಾರಣೆಯಾಗಬೇಕು – ನಟ ಉಪ್ಪೇಂದ್ರ್

ಕಳೆದ ಕೆಲವು ದಿನಗಳಿಂದ ನಡೆಯುತ್ತಿರುವ ದರ್ಶನ್ ಬಂಧನ ರೇಣುಕಾ ಸ್ವಾಮಿ ಕೊಲೆ ಪ್ರಕರಣ ಮತ್ತು ಅದರ ವಿಚಾರಣೆ ಇಡೀ ಕರ್ನಾಟಕ ಮಾತ್ರವಲ್ಲ ಇಡೀ ಭಾರತವೇ ಭೆರಗಾಗಿ ನೋಡುತ್ತಿದೆ.
ಈ ಹೈ ಪ್ರೊಫೈಲ್ ಕೇಸ್ ನ ವಿಚಾರಣೆಯಲ್ಲಿ ನಿಶ್ಪಕ್ಷವಾದ ನಿರ್ಣಯ ಮತ್ತು ನ್ಯಾಯಕ್ಕಾಗಿ ಕಾಯುತ್ತಿದ್ದಾರೆ. ರೇಣುಕಾ ಸ್ವಾಮಿ ಕುಟುಂಬದಲ್ಲಿ, ಜನರಲ್ಲಿ, ಟೀವಿ ಮಾಧ್ಯಮಗಳಲ್ಲಿ ಮತ್ತು ದರ್ಶನ್ ಅಭಿಮಾನಿಗಳಲ್ಲಿ ಏನೇನೋ ಆತಂಕ, ಅನುಮಾನಗಳು ಕಾಡುತ್ತಿದೆ, ಊಹಾಪೋಹಗಳು ಹುಟ್ಟಿಕೊಳ್ಳುತ್ತಿದೆ. ಏಕೆಂದರೆ…… ಯಾವುದೇ ಕೇಸ್ ಆದರೂ ಆ ಕೇಸ್ ನ ವಿಚಾರಣೆಯ ವೀಡಿಯೋ ಧಾಖಲೆಗಳನ್ನು ಮತ್ತು ಸಾಕ್ಷಿಗಳ ಎಲ್ಲಾ ವಿವರಗಳನ್ನು ಆಗಾಗ ಪೋಲೀಸರು ಸಂಬಂದ ಪಟ್ಟ ವ್ಯಕ್ತಿಗಳ ಕುಟುಂಬದವರ ಜೊತೆ ಹಂಚಿಕೊಳ್ಳಬೇಕು ಮತ್ತು ಅದು ಕಾನೂನಾಗಬೇಕು. ( ಹಿಂದೆಲ್ಲಾ ಪೊಲೀಸರು ವಿಚಾರಣೆಯ ವಿವರ ಬರೆದು ದಾಖಲಿಸುತ್ತಿದ್ದರು ಈಗ ತಂತ್ರಜ್ಞಾನ ಇಷ್ಟೊಂದು ಮುಂದುವರೆದಿದ್ದು ಎಲ್ಲವನ್ನೂ ವೀಡಿಯೋ ರೆಕಾರ್ಡ್ ಮತ್ತು ಲೈವ್ ಸ್ಟ್ರೀಮಿಂಗ್ ಮಾಡಬಹುದು )( ಕಾನೂನು ಸುಧಾರಣೆಗಳು #CriminalJusticeReforms )

ಸಾಕ್ಷಿ ನಾಶ, ಪ್ರಭಾವಿಗಳ ಹಸ್ತಕ್ಷೇಪ, ಭ್ರಷ್ಟಾಚಾರ ಇವಕ್ಕೆಲ್ಲಾ ತೆರೆ

ಅದೇ ರೀತಿ ಒಬ್ಬ ಸಾರ್ವಜನಿಕ ವ್ಯಕ್ತಿಯ ಬಗ್ಗೆ ಕೇಸ್ ಆಗಿದ್ದರೆ ಆ ಕೇಸ್ ನ ವಿಚಾರಣೆಯ ವೀಡಿಯೋ ದಾಖಲೆಗಳನ್ನು ಮತ್ತು ಸಾಕ್ಷಿಗಳ ಎಲ್ಲಾ ವಿವರಗಳನ್ನು ಪೋಲೀಸರು ಆಗಾಗ ಸಾರ್ವಜನಿಕವಾಗಿ ತೆರೆದಿಡಬೇಕು ಒಬ್ಬ ಸಾರ್ವಜನಿಕ ವ್ಯಕ್ತಿಯ ವಿಚಾರಣೆ ಸಾರ್ವಜನಿಕವಾಗೇ ಸಂಪೂರ್ಣ ಪಾರದರ್ಶಕತೆಯಿಂದ ಆಗಬೇಕು, ಸಾಕ್ಷಿ ನಾಶ, ಪ್ರಭಾವಿಗಳ ಹಸ್ತಕ್ಷೇಪ, ಭ್ರಷ್ಟಾಚಾರ ಇವಕ್ಕೆಲ್ಲಾ ತೆರೆ ಎಳೆದಂತಾಗುತ್ತದೆ.
ಆಗ ರೇಣುಕಾ ಸ್ವಾಮಿ ಕುಟುಂಬಕ್ಕೆ, ಜನರಿಗೆ, ಟೀವಿ ಮಾಧ್ಯಮಗಳಿಗೆ ಮತ್ತು ದರ್ಶನ್ ಅಭಿಮಾನಿಗಳಿಗೆ ಮನಸಿನಲ್ಲಿ ಗೊಂದಲಗಳಿಲ್ಲದೆೇ ಪೋಲೀಸ್ ಮತ್ತು ಟೀವಿ ಮಾಧ್ಯಮಗಳ ಬಗ್ಗೆ ಇನ್ನೂ ಗೌರವ ಹೆಚ್ಚಾಗುತ್ತದೆ ಮತ್ತು ನ್ಯಾಯ ಸಿಗುತ್ತದೆ ಎಂಬ ನಂಬಿಕೆ ಬರುತ್ತದೆ. ಎಂದು ಸಾಮಾಜಿಕ ಜಾಲತನದ ಇನ್ಸ್ಟಾಗ್ರಾಮ್ ಅಕೌಂಟ್ ನಲ್ಲಿ ಬರೆದು ನಟ ಉಪೇಂದ್ರ ಪೋಸ್ಟ್ ಮಾಡಿದ್ದಾರೆ.


Spread the love

Leave a Comment

error: Content is protected !!