Delhi ಕೇಜ್ರಿವಾಲ್ ನ್ಯಾಯಾಂಗ ಬಂಧನವನ್ನು ಜುಲೈ 3 ರವರೆಗೆ ವಿಸ್ತರಿಸಿದ ನ್ಯಾಯಾಲಯ .
ದೆಹಲಿ ನ್ಯಾಯಾಲಯವು ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಮತ್ತೊಬ್ಬ ಆರೋಪಿ ವಿನೋದ್ ಚೌಹಾಣ್ ಅವರ ನ್ಯಾಯಾಂಗ ಬಂಧನವನ್ನು ಜುಲೈ 3 ರವರೆಗೆ ವಿಸ್ತರಿಸಿದೆ.
ನ್ಯಾಯಾಂಗ ಬಂಧನದ ಅವಧಿ ಮುಗಿದ ನಂತರ ತಿಹಾರ್ ಜೈಲಿನಿಂದ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಇಬ್ಬರನ್ನೂ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.
ಅರವಿಂದ್ ಕೇಜ್ರಿವಾಲ್ ಅವರನ್ನು ಮಾರ್ಚ್ 21ರಂದು ಜಾರಿ ನಿರ್ದೇಶನಾಲಯ ಬಂಧಿಸಿತ್ತು.
ಈ ಪ್ರಕರಣದಲ್ಲಿ ಮಾಜಿ ಸಚಿವ ಮನೀಶ್ ಸಿಸೋಡಿಯಾ ಸೇರಿದಂತೆ ಒಟ್ಟು 38 ಆರೋಪಿಗಳಿದ್ದಾರೆ.