ದರ್ಶನ್ ಕೊಲೆ ಕೇಸ್ ಬಗ್ಗೆ ಡಿಂಪಲ್ ಕ್ವೀನ್ ಏನಂದ್ರು ಗೊತ್ತಾ
ಇತ್ತೀಚೆಗೆ ನಡೆದ ಪ್ರಕರಣದ ಬಗ್ಗೆ ನನ್ನ ಮಾತು..!
ದರ್ಶನ್ ಮತ್ತು ಗ್ಯಾಂಗ್ ಹತ್ಯೆ ಪ್ರಕರಣದ ಕುರಿತು ಡಿಂಪಲ್ ಕ್ವೀನ್ ರಚಿತಾ ರಾಮ್ ಪ್ರತಿಕ್ರಿಯಿಸಿದ್ದಾರೆ. ನಮಸ್ಕಾರ ಈ ನೋಟ್ನ ನಾನು ನಟಿಯಾಗಿ ಅಲ್ಲ ಸಾಮನ್ಯ ಪ್ರಜೆಯಾಗಿ ಬರೆಯುತ್ತಿದ್ದಾನೆ.
ಮೊದಲನೇಯಾದಗಿ ರೇಣುಕಾಸ್ವಾಮಿ ಅವರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬಕ್ಕೆ ಭಗವಂತ ಧೈರ್ಯ ಭರಿಸುವ ಶಕ್ತಿ ನಿಡಲಿ ಎಂಬ ಪ್ರಾರ್ಥನೆ ಮಾಡುತ್ತೇನೆ. ಈ ಹತ್ಯೆಗೆ ಕಾನೂನಾತ್ಮಕವಾಗಿ ನ್ಯಾಯ ಸಿಗುತ್ತದೆಂಬ ಭರವಸೆ ನನಗಿದೆ.
ಅವರು ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಅನ್ನೋದು ನಂಬಲು ಕಷ್ಟ!
ನನ್ನನ್ನು ಚಿತ್ರರಂಗಕ್ಕೆ ಪರಿಚಯಿಸಿದ ನಟ ದರ್ಶನ್ ಸರ್ ನನಗೆ ಗುರು ಸಮಾನರು, ನನ್ನ ಜೀವನದ ತಪ್ಪುಗಳನ್ನು ತಿದ್ದಿ ಮಾರ್ಗದರ್ಶನ ನೀಡಿದಂತಹ ವ್ಯಕ್ತಿ ಇಂತಹ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನುವುದು ನಂಬಲು ಸ್ವಲ್ಪ ಕಷ್ಟವಾಗುತ್ತಿದೆ. ಏನಿದ್ದರೂ ಸತ್ಯ ಪೊಲೀಸ್ ತನಿಖೆಯಿಂದ ನಮ್ಮ ಮುಂದೆ ಬರಲಿದೆ ಎನ್ನುವುದೆ ನನ್ನ ನಂಬಿಕೆ. ನನ್ನ ಮಾಧ್ಯಮ ಮಿತ್ರರು ಈ ಕೇಸ್ನ ವರದಿಯಲ್ಲಿ ಪಾರದರ್ಶಕವಾಗಿರುತ್ತಿರಿ ಮತ್ತು ನಿಶ್ಚಕ್ಷವಾಗಿ ಕೆಲಸ ಮಾಡುತ್ತಿರಿ ಎಂದು ಆಶಿಸುತ್ತೇನೆ.. ಧರ್ಮೋ ರಕ್ಷಿತಿ ರಕ್ಷಿತ:
ಸಾಮಾಜಿಕ ಜಾಲತಾಣಡಲ್ಲಿ ಕಾನೂನಾತ್ಮಕವಾಗಿ ನ್ಯಾಯ ಸಿಗಲಿ ಎಂದು ಬರೆದುಕೊಂಡಿದ್ದಾರೆ.