FAIMA ತರಬೇತಿ ಮಹಿಳಾ ವೈದ್ಯೆಯ ಹತ್ಯೆ ಇಂದಿನಿಂದ ದೇಶಾದ್ಯಂತ ಒಪಿಡಿ ಸೇವೆಗಳನ್ನು ಬಂದ್
ಮಹಿಳಾ ವೈದ್ಯೆಯ ಹತ್ಯೆ: ಆರ್. ಜಿ. ಕರ್ ವೈದ್ಯಕೀಯ ಕಾಲೇಜಿನಲ್ಲಿ ಸ್ನಾತಕೋತ್ತರ ತರಬೇತಿ ವೈದ್ಯರ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಮತ್ತು ಹತ್ಯೆಯ ವಿರುದ್ಧ ಕಿರಿಯ ವೈದ್ಯರು, ತರಬೇತಿ ವೈದ್ಯರು ಮತ್ತು ವೈದ್ಯಕೀಯ ವಿದ್ಯಾರ್ಥಿಗಳು ದೇಶಾದ್ಯಂತ ಪ್ರತಿಭಟನೆ ನಡೆಸುತ್ತಿದ್ದಾರೆ. ದೇಶಾದ್ಯಂತ ಸರ್ಕಾರಿ ಆಸ್ಪತ್ರೆಗಳಲ್ಲಿ ಒಪಿಡಿ ಸೇವೆ ಬಂದ್ ಇಂದಿನಿಂದ ದೇಶಾದ್ಯಂತ ಒಪಿಡಿ ಸೇವೆಗಳನ್ನು ಮುಚ್ಚುವುದಾಗಿ ಅಖಿಲ ಭಾರತ ವೈದ್ಯಕೀಯ ಸಂಘಗಳ ಒಕ್ಕೂಟ (FAIMA) ಘೋಷಿಸಿದೆ. ಕೋಲ್ಕತ್ತಾದ ಆಸ್ಪತ್ರೆಯೊಂದರಲ್ಲಿ ತರಬೇತಿ ನಿರತ ಮಹಿಳಾ ವೈದ್ಯೆಯ ಮೇಲೆ ನಡೆದ ಅತ್ಯಾಚಾರ ಮತ್ತು ಹತ್ಯೆ ವಿರೋಧಿಸಿ ಈ ಮುಷ್ಕರ ನಡೆಸಲಾಗುತ್ತಿದೆ. ಸೋಮವಾರ, ಫೆಡರೇಶನ್ ಆಫ್ ಆಲ್ ಇಂಡಿಯಾ ರೆಸಿಡೆಂಟ್ ಡಾಕ್ಟರ್ಸ್ ಅಸೋಸಿಯೇಷನ್ (FORDA) ಕರೆ ಮೇರೆಗೆ ದೇಶದ ಆಸ್ಪತ್ರೆಗಳಲ್ಲಿ ವೈದ್ಯರು ಮುಷ್ಕರ ನಡೆಸಿದರು. ಇದರಿಂದಾಗಿ ರೋಗಿಗಳು ತೀವ್ರ ತೊಂದರೆ ಅನುಭವಿಸಬೇಕಾಯಿತು