Basanagowda Patila yatnal ಶಾಸಕ ಬಸನಗೌಡ ಪಾಟೀಲಯತ್ನಾಳ ವಿರುದ್ದ ದೂರು ದಾಖಲು
ಬಾಗಲಕೋಟೆ: ಮುಧೋಳ ನಗರದಲ್ಲಿ ಸೆ.೧೯ರ ರಾತ್ರಿ ಗಣೇಶ ಮೂರ್ತಿ ವಿಸರ್ಜನೆ ವೇಳೆ ನಡೆದ ಸಭೆಯಲ್ಲಿ
ಪ್ರಚೋಧನಕಾರಿ ಭಾಷಣ ಮಾಡಿದ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ವಿರುದ್ದ
ಮುಧೋಳ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ಪ್ರಕರಣ ದಾಖಲಾಗಿದೆ.
ತಮ್ಮ ಭಾಷಣದುದ್ದಕ್ಕೂ ಪ್ರಚೋದನಾತ್ಮಕವಾಗಿ ಮಾತನಾಡಿರುವುದರಿಂದ ಸಮಾಜದ ಸ್ವಾಸ್ಥ್ಯ ಹಾಳಾಗುತ್ತದೆ
ಎಂಬ ಹಿನ್ನೆಲೆ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥರೆಡ್ಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.