ಮೇ 26 ರಂದು ಕೂಡಲಸಂಗಮದಲ್ಲಿ ಮೀನು ಹಿಡಿಯುವ ಸ್ಪರ್ಧೆ
ಬಾಗಲಕೋಟ ಜಿಲ್ಲೆಯ ಇಳಕಲ್‌ದ ಎಸ್ ಆರ್ ಕೆ ಫಿಶಿಂಗ್ ಕ್ಲಬ್ ವತಿಯಿಂದ ಮೇ 26 ರವಿವಾರದಂದು ಐತಿಹಾಸಿಕ ಕೂಡಲಸಂಗಮ ಸುಕ್ಷೇತ್ರದಲ್ಲಿ ಮೀನು ಹಿಡಿಯುವ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ ಎಂದು ಅಬ್ಬು ಹಳ್ಳಿ ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ಸ್ಪರ್ಧೆ ಮುಂಜಾನೆ 8 ಗಂಟೆಯಿAದ ಮಧ್ಯಾಹ್ನ 2 ಗಂಟೆಯವರೆಗೆ ನಡೆಯಲಿದೆ ಮೀನು ಹಿಡಿಯುವ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿದವರಿಗೆ 15 ಸಾವಿರ ,ದ್ವಿತೀಯ ಸ್ಥಾನ ಗಳಿಸಿದವರಿಗೆ 10 ಸಾವಿರ ಮತ್ತು ತೃತೀಯ ಸ್ಥಾನ ಗಳಿಸಿದವರಿಗೆ 5 ಸಾವಿರ ನಗದು ಬಹುಮಾನ ನೀಡಲಾಗುವದು.ಶಾಸಕ ವಿಜಯಾನಂದ ಕಾಶಪ್ಪನವರ ಸ್ಪರ್ಧೆಯನ್ನು ಉದ್ಘಾಟಿಸಲಿದ್ದಾರೆ.
ಅತಿಥಿಗಳಾಗಿ ಇಳಕಲ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಬ್ದಲರಜಾಕ ತಟಗಾರ ಹುನಗುಂದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗಂಗಾಧರ ದೊಡ್ಡಮನಿ ಮತ್ತು ಗಣ್ಯರು ಆಗಮಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ವರದಿ : ಭೀಮಣ್ಣ ಗಾಣಿಗೇರ (ಇಳಕಲ್ಲ)