ಕೂಲಿಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ
ಬಾಗಲಕೋಟೆ ಜಿಲ್ಲೆಯ ಇಳಕಲ್ಲ ತಾಲೂಕಿನ ಕೆಲೂರ್ ಗ್ರಾಮ ಪಂಚಾಯಿತಿಯ ಕುಣಿಬೆಂಚಿ ಗ್ರಾಮದಲ್ಲಿ ಗ್ರಾಮ ಆರೋಗ್ಯ ಕಾರ್ಯಕ್ರಮದ ಅಡಿಯಲ್ಲಿ ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯ ಕೂಲಿಕಾರ್ಮಿಕರಿಗೆ ಆರೋಗ್ಯ ತಪಾಸಣಾ ಶಿಬಿರ ಹನಡೆಯಿತು.
ಆರೋಗ್ಯ ತಪಾಸಣಾ ಶಿಬಿರದಲ್ಲಿ ರಕ್ತದೊತ್ತಡ, ಸಕ್ಕರೆ ಕಾಯಿಲೆ, ಕ್ಷಯರೋಗ ಸೇರಿದಂತೆ ಅಸಾಂಕ್ರಾಮಿಕ ರೋಗಗಳ ತಪಾಸಣೆ ಮಾಡುವುದಲ್ಲದೆ, ಮಾನಸಿಕ ಆರೋಗ್ಯ ಹಾಗೂ ಸಂಭಾವ್ಯ ಆರೋಗ್ಯ ಸಮಸ್ಯೆಗಳ ಕುರಿತು ಅರಿವು ಮೂಡಿಸಲಾಯಿತು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷರು, ಗ್ರಾಮ ಪಂಚಾಯತಿಯ ಸದಸ್ಯರು ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ಹಾಗೂ ಇಲಕಲ್ ತಾಲೂಕ Iಇಅ ಸಂಯೋಜಕರು ಹಾಗೂ ಜಿಲ್ಲಾ ಪಂಚಾಯತ್ ಬಾಗಲಕೋಟ್ ಗ್ರಾಮ ಆರೋಗ್ಯ ಕಾರ್ಯಕ್ರಮದ ಏಊPಖಿ ಸಂಸ್ಥೆಯ ತಾಂತ್ರಿಕ ಬೆಂಬಲ ಸಂಯೋಜಕರು ಇದ್ದರು.