District BJP Raitha Morcha President ಜಿಲ್ಲಾ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷರಾಗಿ ಗಡಿಯಣ್ಣನವರ ಆಯ್ಕೆ
ಇಳಕಲ್ : ಬಾಗಲಕೋಟೆ ಜಿಲ್ಲೆಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷರಾಗಿ
ಇಳಕಲ್ ತಾಲೂಕಿನ ಕಂದಗಲ್ಲ ಗ್ರಾಮದ ಮಲ್ಲಿಕಾರ್ಜುನ ಶಿವರುದ್ರಪ್ಪ ಗಡಿಯಣ್ಣವರ
ಅವರನ್ನು ನೇಮಕ ಮಾಡಿ ಆದೇಶವನ್ನು ಹೊರಡಿಸಿದ್ದಾರೆ. ತಮ್ಮನ್ನು ಆಯ್ಕೆ ಮಾಡಿದ
ಹುನಗುಂದ ಮಾಜಿ ಶಾಸಕ ದೊಡ್ಡನಗೌಡ ಪಾಟೀಲ್ ಹಾಗೂ ಬಿಜೆಪಿ ರಾಜ್ಯಾದ್ಯಾಕ್ಷ
ಬಿ ವೈ ವಿಜಯೇಂದ್ರ ಅವರಿಗೆ ಧನ್ಯವಾದವನ್ನು ತಿಳಿಸಿದ್ದಾರೆ.
ನೂತನ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷರಾಗಿ ಆಯ್ಕೆಯಾಗಿದ್ಧಕ್ಕೆ ಜಿಲ್ಲೆಯ
ರಾಜಕೀಯ ಮುಖಂಡರು ಹಿರಿಯರು ಯುವಕರು ಹಾಗೂ ಹಲವಾರು
ಸಂಘ ಸಂಸ್ಥೆಗಳು ಮತ್ತು ಗಣ್ಯ ವ್ಯಕ್ತಿಗಳು ಅಭಿನಂದನೆಗಳನ್ನು ತಿಳಿಸಿದ್ದಾರೆ.