world cup ವಿಶ್ವಕಪ್ ಟ್ರೋಫಿಯೊಂದಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ಮಾಡಿದ ಭಾರತೀಯ ಕ್ರಿಕೆಟ್ ತಂಡ
ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ, ಟಿ೨೦ ವಿಶ್ವಕಪ್ ಚಾಂಪಿಯನ್ ಜಯಿಸಿದ ಬಳಿಕ ಇಂದು ಭಾರತಕ್ಕೆ ಬಂದಿಳಿದಿದ್ದು, ಟೀಂ ಇಂಡಿಯಾಗೆ ತವರಿನಲ್ಲಿ ಭರ್ಜರಿ ಸ್ವಾಗತ ಸಿಕ್ಕಿದೆ.ಭಾರತಕ್ಕೆ ಬಂದಿಳಿದ ಟೀಂ ಇಂಡಿಯಾ, ಖಾಸಗಿ ಹೋಟೆಲ್‌ಗೆ ತೆರಳಿದ ಬಳಿಕ ಬೆಳಗ್ಗೆ ೧೧ ಗಂಟೆಗೆ ಪ್ರಧಾನಿ ನರೇಂದ್ರ ಮೋದಿಯವರ ಆಹ್ವಾನದ ಮೇರೆಗೆ ಅವರ ನಿವಾಸಕ್ಕೆ ಭೇಟಿ ನೀಡಿತು.
ಪ್ರಧಾನಿ ನರೇಂದ್ರ ಮೋದಿ ವಿಶ್ವಕಪ್ ಟ್ರೋಫಿ ಗೆದ್ದ ಭಾರತ ತಂಡಕ್ಕೆ ತಮ್ಮ ನಿವಾಸದಲ್ಲಿ ಔತಣಕೂಟ ಏರ್ಪಡಿಸಿದ್ದರು. ಈ ಸಂದರ್ಭದಲ್ಲಿ ಟೀಂ ಇಂಡಿಯಾ ಆಟಗಾರರನ್ನು ಪ್ರಧಾನಿ ಮೋದಿ ಅಭಿನಂದಿಸಿದ್ದಾರೆ. ಪ್ರಧಾನಿಯವರ ಜತೆ ಮಾತುಕತೆ ಮುಗಿಸಿದ ಬಳಿಕ ಇದೀಗ ಭಾರತ ಕ್ರಿಕೆಟ್ ತಂಡವು ಮುಂಬೈನತ್ತ ಪ್ರಯಾಣ ಬೆಳೆಸಿದೆ.
ಜೂನ್ 29ರಂದು ನಡೆದ ಐಸಿಸಿ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ, ದಕ್ಷಿಣ ಆಫ್ರಿಕಾ ಎದುರು 07 ರನ್ ರೋಚಕ ಜಯ ಸಾಧಿಸಿ 17 ವರ್ಷಗಳ ಬಳಿಕ ಎರಡನೇ ಬಾರಿಗೆ ಟಿ20 ವಿಶ್ವಕಪ್ ಟ್ರೋಫಿ ಜಯಿಸುವಲ್ಲಿ ಯಶಸ್ವಿಯಾಗಿತ್ತು. ಇದಾದ ಬಳಿಕ ಜುಲೈ ೦1ರಂದು ದಿನ ಟೀಂ ಇಂಡಿಯಾ ತವರಿಗೆ ವಾಪಾಸಾಗಬೇಕಿತ್ತು. ಆದರೆ ಬಾರ್ಬಡೊಸ್‌ನಲ್ಲಿ ಬೆರಿಲ್ ಚಂಡಮಾರುತ ಅಪ್ಪಳಿಸಿದ್ದರಿಂದ,
ಪ್ರತಿಕೂಲ ವಾತಾವರಣ ಉಂಟಾಗಿ ಭಾರತ ತಂಡ ತವರಿಗೆ ವಾಪಾಸ್ಸಾಗುವುದು ತಡವಾಯಿತು. ಇದೀಗ ಇಂದು ಮುಂಜಾನೆ 6 ಗಂಟೆಗೆ ರಾಷ್ಟ್ರ ರಾಜಧಾನಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾರತ ಕ್ರಿಕೆಟ್ ತಂಡವು ಬಂದಿಳಿಯಿತು. ಭಾರತ ತಂಡವು ತವರಿಗೆ ಬಂದಿಳಿಯುತ್ತಿದ್ದOತೆಯೇ ಅಭಿಮಾನಿಗಳಿಂದ ಭರ್ಜರಿ ಸ್ವಾಗತ ಸಿಕ್ಕಿದೆ.
ಇಂದು ಸಂಜೆ ರೋಡ್ ಶೋ
ಮುಂಬೈನಲ್ಲಿ ಇಂದು ಸಂಜೆ ರೋಡ್ ಶೋ: ಸದ್ಯ ಪ್ರಧಾನಿ ನರೇಂದ್ರ ಮೋದಿ ನಿವಾಸದಲ್ಲಿ ಔತಣಕೂಟದಲ್ಲಿ ಭಾಗವಹಿಸಿದ ಟೀಂ ಇಂಡಿಯಾ, ಸಂಜೆ 5 ಗಂಟೆಯಿOದ ನಾರಿಮನ್ ಪಾಯಿಂಟ್‌ನಿOದ ಸುಮಾರು ೨ ಕಿ. ಮೀ. ದೂರ ಇರುವ ವಾಂಖೇಡೆ ಕ್ರೀಡಾಂಗಣದವರೆಗೆ ಆಟಗಾರರು ತೆರೆದ ವಾಹನದಲ್ಲಿ ಮೆರವಣಿಗೆ ನಡೆಸಲಿದ್ದಾರೆ.
7 ಗಂಟೆಗೆ ಕ್ರೀಡಾಂಗಣದಲ್ಲಿ ಸನ್ಮಾನ ಕಾರ್ಯಕ್ರಮ ನಡೆಯಲಿದೆ. ಬಿಸಿಸಿಐ ಘೋಷಿಸಿರುವ 125 ಕೋಟಿ ರು. ನಗದು ಬಹುಮಾನವನ್ನೂ ಇದೇ ವೇಳೆ ಹಸ್ತಾಂತರಿಸಲಾಗುತ್ತದೆ