CM Siddaramaiah ಜನಾರ್ಧನರೆಡ್ಡಿಯವರೊಬ್ಬ ಜುಜುಬಿ ರಾಜಕಾರಣಿ : ಸಿಎಂ ಸಿದ್ದರಾಮಯ್ಯ
ಸಂಡೂರ : ನೀವು ಎಷ್ಟು ವರ್ಷ ಜೈಲಿಗೆ ಹೋಗಿ ಬಂದಿದೀರಿ ಎಂದು ಜಗತ್ತು ನೋಡಿದೆ. ನಿಮ್ಮ ಅಟ್ಟಹಾಸ ಮುರಿದದ್ದು, ಬಳ್ಳಾರಿ ಜಿಲ್ಲೆಯ ಮಹಾಜನತೆಯನ್ನು ಭಯಮುಕ್ತಗೊಳಿಸಿದ್ದು ಇದೇ ಸಿದ್ದರಾಮಯ್ಯ ಅನ್ನೋದನ್ನು ಮರೀಬೇಡಿ.
ರೆಡ್ಡಿಯವರೇ, ಕರ್ನಾಟಕ ರಾಜ್ಯ ರಾಜಕಾರಣಕ್ಕೆ ನನ್ನ ಕೊಡುಗೆ ಏನು? ಬಳ್ಳಾರಿಗೆ ನಿಮ್ಮ ಕೊಡುಗೆ ಏನು? ನೀವೇನು ಬಳ್ಳಾರಿ ಯಜಮಾನರಾ? ಮತ ಹಾಕುವ ಬಳ್ಳಾರಿಯ ಜನ, ಸಂಡೂರಿನ ಜನ ನಮ್ಮ ಯಜಮಾನರು. ನೆನಪಿರಲಿ. ನಾನು ಗಂಗಾವತಿಗೆ ಪ್ರಚಾರಕ್ಕೆ ಹೋಗಲು ಆಗಲಿಲ್ಲ,
ನಮ್ಮ ಕಾಂಗ್ರೆಸ್ ಅಭ್ಯರ್ಥಿ ಸರಿಯಾದ ಪ್ರಚಾರ ಮಾಡಲಿಲ್ಲ ಹೀಗಾಗಿ ನೀವು ಗೆದ್ರಿ. ನಿಮ್ಮ ಈ ಗೆಲುವು ಶಾಶ್ವತ ಅಲ್ಲ. ಯಾರ ಗೆಲುವೂ ಶಾಶ್ವತ ಅಲ್ಲ. ನೆನಪಿರಲಿ. ನನ್ನ ಬಗ್ಗೆ ಏಕ ವಚನದಲ್ಲಿ ಮಾತನಾಡುವ ಯೋಗ್ಯತೆ ನಿಮಗಿಲ್ಲ
.
ಬಳ್ಳಾರಿಯಲ್ಲಿ ಪ್ರಜಾಪ್ರಭುತ್ವ ಇರಬಾರದಾ? ನಮ್ಮ ಸರ್ಕಾರ ಇದೆ. ಯಡಿಯೂರಪ್ಪ ಅವರು, ನೀವು ಮಾತನಾಡುತ್ತಿಲ್ಲವಾ? ನಿಮ್ಮ ಸರ್ಕಾರ ಇದ್ದಾಗ ನನಗೆ ಬಳ್ಳಾರಿಯಲ್ಲಿ ಮಾತನಾಡಲು ಜಾಗ ಕೊಟ್ಟಿರಲಿಲ್ಲ.
ನನಗೆ ಕುಡಿಯೋದಕ್ಕೆ ನೀರು ಕೇಳಿದ್ರೂ ಜನ ನೀರು ಕೊಡೋಕೂ ಭಯ ಪಡ್ತಾ ಇದ್ರು. ನಮ್ಮ ಯಜಮಾನರಾದ ಬಳ್ಳಾರಿ ಜನರನ್ನು ಇಷ್ಟು ಭಯದಲ್ಲಿ ಇಟ್ಟಿದ್ರಲ್ಲಾ ಈಗ ಯಾವ ಮುಖ ಹೊತ್ತುಕೊಂಡು ಇದೇ ಜನರ ಬಳಿ ಮತ ಕೇಳಲು ಬಂದಿದ್ದೀರಿ? ನಾಚಿಕೆ ಆಗೋದಿಲ್ವಾ ನಿಮಗೆ ಎಂದು ಕುಟುಕಿದರು.