Kangana Ranaut ವಿಮಾನ ನಿಲ್ದಾಣದಲ್ಲಿ ಕಂಗನಾ ರನೌತ್ಗೆ ಸಿಐಎಸ್ಎಫ್ ಸಿಬ್ಬಂದಿ ಕಪಾಳಮೋಕ್ಷ
ಚಂಡೀಗಢಃ ಪ್ರತಿಭಟನಾ ನಿರತ ರೈತರನ್ನು ಖಲಿಸ್ತಾನಿಗಳು ಎಂದು ಕರೆದಿದ್ದಕ್ಕಾಗಿ ಬಾಲಿವುಡ್ ನಟಿ-ರಾಜಕಾರಣಿ ಕಂಗನಾ ರನೌತ್ ಅವರನ್ನು ಚಂಡೀಗಢ ವಿಮಾನ ನಿಲ್ದಾಣದಲ್ಲಿ ಗುರುವಾರ ಸಿಖ್ ಸಿಐಎಸ್ಎಫ್ ಕಾನ್ಸ್ಟೇಬಲ್ ಕುಲ್ವಿಂದರ್ ಕೌರ್ ಕಂಗನಾ ರನೌತ್ ಕಪಾಳಕ್ಕೆ ಹೊಡೆದ ಘಟನೆ.ಶುಕ್ರವಾರ ಮಧ್ಯಾಹ್ನ 3.30 ರ ಸುಮಾರಿಗೆ ನಡೆದಿದೆ.
ರಾಷ್ಟ್ರ ರಾಜಧಾನಿಯಲ್ಲಿ ನಡೆದ ಎನ್ಡಿಎ ಸಂಸದರ ಸಭೆಯಲ್ಲಿ ಭಾಗವಹಿಸಲು ಕಂಗನಾ ದೆಹಲಿಗೆ ವಿಮಾನ ಹತ್ತಲು ಹೊರಟಿದ್ದಾಗ ವಿಮಾನ ನಿಲ್ದಾಣದ ಸಿ ಐ ಎಸ್ ಎಫ್ ಸಿಬ್ಬಂದಿ ಒಬ್ಬರು ಕಂಗಣ ರಣಾವತ್ ಕಪಾಳಕ್ಕೆ ಹೊಡೆದ ಈ ಘಟನೆ ನಡೆದಿದೆ. ಕಾನ್ಸ್ಟೆಬಲ್ನ ವರ್ತನೆಗೆ ನಟಿ ತೀವ್ರ ಆಕ್ಷೇಪ ವ್ಯಕ್ತಪಡಿಸಿ ಸಿಐಎಸ್ಎಫ್ ಅಧಿಕಾರಿಗಳಿಂದ ವಿವರಣೆ ಪಡೆಯಲು ಪ್ರಯತ್ನಿಸಿದಾಗ, ಇತರ ಸಿಬ್ಬಂದಿ ಅವರನ್ನು ಸಮಾಧಾನಪಡಿಸಿದರು.
ರೈತರ ಪ್ರತಿಭಟನೆಗಳ ಬಗ್ಗೆ ಕಂಗನಾ ಮಾಡಿದ ಹೇಳಿಕೆಯಿಂದ ಕೋಪಗೊಂಡಿದ್ದ ಕೌರ್
ರೈತರ ಪ್ರತಿಭಟನೆಗಳ ಬಗ್ಗೆ ಕಂಗನಾ ಮಾಡಿದ ಹೇಳಿಕೆಯಿಂದ ಕೌರ್ ಕೋಪಗೊಂಡಿದ್ದರು ಎಂದು ಆರೋಪಿಸಲಾಗಿದೆ.
ಮುಂದಿನ ತನಿಖೆ ನಡೆಸಲು ಹಿರಿಯ ಸಿಐಎಸ್ಎಫ್ ಅಧಿಕಾರಿಗಳನ್ನು ಒಳಗೊಂಡ ತನಿಖಾ ಸಮಿತಿಯನ್ನು ರಚಿಸಲಾಗಿದೆ.
ರಣಾವತ್ ಅವರು ಹಿಮಾಚಲ ಪ್ರದೇಶದ ಮಂಡಿಯಿಂದ ಲೋಕಸಭಾ ಚುನಾವಣೆಯಲ್ಲಿ ಗೆದ್ದ ಕೆಲವು ದಿನಗಳ ನಂತರ ಅವರ ಮೇಲೆ ಈ ದಾಳಿ ನಡೆದಿದೆ. ಚುನಾವಣಾ ಆಯೋಗದ ವೆಬ್ಸೈಟ್ ಪ್ರಕಾರ, ರಾಷ್ಟ್ರೀಯ ಪ್ರಶಸ್ತಿ ವಿಜೇತ ನಟ ಕಾಂಗ್ರೆಸ್ ಪ್ರತಿಸ್ಪರ್ಧಿ ವಿಕ್ರಮಾದಿತ್ಯ ಸಿಂಗ್ ಅವರನ್ನು 74,755 ಮತಗಳ ಅಂತರದಿಂದ ಸೋಲಿಸಿದ್ದಾರೆ.