Kashappanavara ಭುವನೇಶ್ವರಿದೇವಿಗೆ ಪೂಜೆ ಸಲ್ಲಿಸಿದ ಶಾಸಕ ಕಾಶಪ್ಪನವರ
ಇಳಕಲ್ಲ : ಕಾಂಗ್ರೆಸ್ ಕಾರ್ಯಾಲಯದಲ್ಲಿ ಕನ್ನಡ ರಾಜ್ಯೋತ್ಸವವನ್ನು ಭುವನೇಶ್ವರಿದೇವಿಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಆಚರಣೆ ಮಾಡಲಾಯಿತು.ಈ ಸಮಯದಲ್ಲಿ ಮಾತನಾಡಿದ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷ ಶಾಸಕ ವಿಜಯಾನಂದ ಕಾಶಪ್ಪನವರ ಮಾತನಾಡಿ ಭವ್ಯ ಪರಂಪರೆಯ ಕರ್ನಾಟಕದಲ್ಲಿ ಎಲ್ಲಾ ರೀತಿಯ ಜನರು ವಾಸವಾಗಿದ್ದು ಪ್ರತಿಯೊಬ್ಬರು ಕನ್ನಡ ಭಾಷೆಯನ್ನು ಕಲಿತು ಕನ್ನಡ ತಾಯಿಗೆ ಗೌರವ ಸಲ್ಲಿಸಬೇಕು ಈ ಬಾರಿಯೂ ನಮ್ಮ ಸರಕಾರ ನಗರದ ನಾಲ್ಕು ಗಣ್ಯರನ್ನು ಗುರುತಿಸಿ ಒಬ್ಬರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಮೂವರಿಗೆ ಸುವರ್ಣ ಸಂಭ್ರಮ ಪ್ರಶಸ್ತಿ ನೀಡಿ ಗೌರವಿಸಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷೆ ಸುಧಾರಾಣಿ ಸಂಗಮ್, ಉಪಾಧ್ಯಕ್ಷೆ ಕಾಳಮ್ಮ ಜಕ್ಕಾ, ನಾಮನಿರ್ದೇಶಿತ ಸದಸ್ಯರಾದ ಮಲ್ಲು ಮಡಿವಾಳರ, ಯಲ್ಲಪ್ಪ ರಾಜಾಪೂರ, ರಾಧೇಶ್ಯಾಮ ದರಕ, ಕಾಂಗ್ರೆಸ್ ಮುಖಂಡರಾದ ಶರಣಪ್ಪ ಆಮದಿಹಾಳ, ವಿಜಯ ಗದ್ದನಕೇರಿ,ಶಿವಾನಂದ ಮುಚಖಂಡಿ ಸೇರಿದಂತೆ ಮುಖಂಡರು ಕಾರ್ಯಕರ್ತರು ಇದ್ದರು.
ನಗರಸಭೆ ಕಾರ್ಯಾಲಯ : ನಗರಸಭೆಯ ಎಸ್.ಆರ್.ಕಂಠಿ ಸಭಾಂಗಣದಲ್ಲಿ ಭುವನೇಶ್ವರಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ನಗರಸಭೆ ಪೌರಾಯುಕ್ತ ಶ್ರೀನಿವಾಸ ಜಾಧವ, ನಗರಸಭೆ ಅಧ್ಯಕ್ಷೆ ಸುಧಾರಾಣಿ ಸಂಗಮ್, ಉಪಾಧ್ಯಕ್ಷೆ ಕಾಳಮ್ಮ ಜಕ್ಕಾ ಮತ್ತು ಸದಸ್ಯರು ಭುವನೇಶ್ವರ ಭಾವಚಿತ್ರಕ್ಕೆ ಪುಷ್ಪನಮನ ಅರ್ಪಿಸಿದರು. ಈ ಸಮಯದಲ್ಲಿ ನಗರಸಭೆಯ ಸಿಬ್ಬಂದಿ ವರ್ಗದವರು ಇದ್ದರು.
ತಹಸೀಲ್ದಾರ ಕಾರ್ಯಾಲಯ: ನಗರದ ತಾಲೂಕಾಡಳಿತದಲ್ಲಿ ಕನ್ನಡ ರಾಜ್ಯೋತ್ಸವದ ನಿಮಿತ್ಯ ಭುವನೇಶ್ವರಿ ಭಾವಚಿತ್ರಕ್ಕೆ ತಹಸೀಲ್ದಾರ ಸತೀಶ ಕೂಡಲಗಿ ಪೂಜೆ ಸಲ್ಲಿಸಿ ಪುಷ್ಪನಮನವನ್ನು ಅರ್ಪಿಸಿದರು.ಈ ಸಮಯದಲ್ಲಿ ಸರಕಾರಿ ನೌಕರರ ಸಂಘದ ಅಧ್ಯಕ್ಷ ಪರಶುರಾಮ ಪಮ್ಮಾರ, ಕನ್ನಡ ಸಾಹಿತ್ಯ ಪರಿಷತ್ತ ಅಧ್ಯಕ್ಷ ಮಹಾದೇಬ ಕಂಬಾಗಿ, ರಂಗಸAಘಟಕ ಮಹಾಂತೇಶ ಗಜೇಂದ್ರಗಡ ಸೇರಿದಂತೆ ತಾಲೂಕಾಡಳಿತ ಸಿಬ್ಬಂದಿ ವರ್ಗದವರು ಇದ್ದರು.