MLA Kashappanavara ಡಾ ಮಹಾಂತಶ್ರೀಗಳು ಹಾಕಿಕೊಟ್ಟ ಮಾರ್ಗದಲ್ಲಿ ಮುನ್ನಡೆಯೋಣ : ಶಾಸಕ ಕಾಶಪ್ಪನವರ
ಇಳಕಲ್ : ಡಾಮಹಾಂತಶ್ರೀಗಳು ಹಾಕಿಕೊಟ್ಟ ಮಾರ್ಗದಲ್ಲಿ ನಾವೆಲ್ಲರೂ ಸಾಗೋಣ ಎಲ್ಲರೂ ಕೆಟ್ಟ ಚಟಗಳಿಂದ ದೂರವಾಗೋಣ ಎಂದು ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷ ಶಾಸಕ ವಿಜಯಾನಂದ ಕಾಶಪ್ಪನವರ ಹೇಳಿದರು.
ಇಲ್ಲಿನ ತಹಸೀಲ್ದಾರ ಕಚೇರಿಯಲ್ಲಿ ವ್ಯಸನಮುಕ್ತ ದಿನಾಚರಣೆ ಅಂಗವಾಗಿ ತಾಲೂಕಾಡಳಿತ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಡಾ ಮಹಾಂತಶ್ರೀಗಳ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದ ಅವರು ಜನರಲ್ಲಿ ತುಂಬಿಕೊAಡಿದ್ದ ಎಲ್ಲಾ ರೀತಿಯ ಮೌಢ್ಯಗಳನ್ನು ಹೋಗಲಾಡಿಸುವಲ್ಲಿ ಶ್ರೀಗಳು ಮಾಡಿದ ಹೋರಾಟ ಅತ್ಯಂತ ದೊಡ್ಡದು ಎಂದು ಹೇಳಿದರು.
ಸಾನಿಧ್ಯ ವಹಿಸಿದ್ದ ಗುರುಮಹಾಂತಶ್ರೀಗಳು ಮಾತನಾಡಿ ಸರಕಾರದ ವತಿಯಿಂದ ರಾಜ್ಯದ ಎಲ್ಲೆಡೆ ವ್ಯಸನ ಮುಕ್ತ ದಿನಾಚರಣೆಯನ್ನು ಆಚರಿಸಲು ಆದೇಶ ಮಾಡಿ ಉತ್ತಮ ಕಾರ್ಯವನ್ನು ಮಾಡಲಾಗಿದೆ ಅದಕ್ಕಾಗಿ ಸರಕಾರವನ್ನು ನಾವು ಅಭಿನಂದಿಸುತ್ತೇವೆ ಎಂದು ಹೇಳಿದರು.
ಇದೇ ಸಮಯದಲ್ಲಿ ಹಲವಾರು ವಿದ್ಯಾರ್ಥಿಗಳು ವಿವಿಧ ವೇಷಗಳನ್ನು ಧರಿಸಿಕೊಂಡು ಅವುಗಳನ್ನು ಪ್ರದರ್ಶಿಸಿದರು, ಪ್ರಶಸ್ತಿ ವಿಜೇತ ಮಕ್ಕಳಿಗೆ ಶಾಸಕರು ಬಹುಮಾನಗಳನ್ನು ವಿತರಿಸಿದರು.
ಕಾರ್ಯಕ್ರಮದಲ್ಲಿ ತಹಸೀಲ್ದಾರ ಸತೀಶ ಕೂಡಲಗಿ, ಈಶ್ವರ ಗಡ್ಡಿ ,ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಮುರಳಿ ದೇಶಪಾಂಡೆ,
ಸರಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಚೇತನಾ ಶ್ಯಾವಿ, ಪೌರಾಯುಕ್ತ ಶ್ರೀನಿವಾಸ ಜಾಧವ, ಬಸವಕೇಂದ್ರ ಅಧ್ಯಕ್ಷ ಶಿವಾನಂದ ರೂಳಿ, ಕನ್ನಡ ಸಾಹಿತ್ಯ ಪರಿಷತ್ತ ತಾಲೂಕಾಧ್ಯಕ್ಷ ಮಹಾದೇವ ಕಂಬಾಗಿ, ಮಾಜಿ ಅಧ್ಯಕ್ಷ ಸಂಗಣ್ಣ ಗದ್ದಿ, ಅಕ್ಕನ ಬಳಗದ ಅಧ್ಯಕ್ಷೆ ಸುವರ್ಣ ಗೊಂಗಡಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.