ಪ್ರತಿಯೊಬ್ಬರೂ ಕಡ್ಡಾಯವಾಗಿ ಮತದಾನ ಮಾಡಬೇಕು : ತಾ.ಪಂ.ಅಧಿಕಾರಿ ಮುರಳಿಧರ ದೇಶಪಾಂಡೆ
ಬಾಗಲಕೋಟೆಯ ಜಿಲ್ಲೆಯ ಇಳಕಲ್ ತಾಲೂಕಿನ ನಂದವಾಡಗಿ ಗ್ರಾಮದಲ್ಲಿ ತಾಲೂಕಾ ಆಡಳಿತ ಮತ್ತು ಗ್ರಾಮ ಪಂಚಾಯತಿ ವತಿಯಿಂದ ಲೋಕಸಭಾ ಚುನಾವಣೆ ೨೦೨೪ ರ ಪ್ರಯುಕ್ತ ಮತದಾರರಿಗೆ ಮತದಾನದ ಜಾಗೃತಿ ಕಾರ್ಯಕ್ರಮ ಮಂಗಳವಾರದAದು ಸಾಯಂಕಾಲ ಜರುಗಿತು.
ಅಭಿಯಾನವನ್ನು ತಾಲೂಕಾ ಪಂಚಾಯತ ಅಧಿಕಾರಿ ಮುರಳಿಧರ ದೇಶಪಾಂಡೆ ಉದ್ಘಾಟಿಸಿ ಮಾತನಾಡಿದ ಅವರು ನಿಮ್ಮ ಜಿಲ್ಲೆಯ ಸಂಸದರನ್ನು ಆಯ್ಕೆ ಮಾಡುವ ಜವಾಬ್ದಾರಿ ನಿಮ್ಮ ಮೇಲಿದ್ದು ಆದ್ದರಿಂದ ಪ್ರತಿಯೊಬ್ಬರು ಕಡ್ಡಾಯವಾಗಿ ಮತದಾನವನ್ನು ಮಾಡಬೇಕು ಎಂದು ಹೇಳಿದರು.
ಕಾರ್ಯಕ್ರಮದ ಸಾನಿಧ್ಯವನ್ನು ನಂದವಾಡಗಿ ಶ್ರೀಮಠದ ಡಾ.ಚನ್ನಬಸವದೇವರು ವಹಿಸಿದ್ದರು. ಮತದಾನದದ ಕುರಿತು ಕಿರು ನಾಟಕ ಹಾಗೂ ಕ್ಯಾಂಡಲ್ ಮೂಲಕ ಸಂಘದ ಸದಸ್ಯರಿಗೆ ಮಾಹಿತಿ ಹೇಳಲಾಯಿತು.
ರಂಗೋಲಿ ಸ್ಪರ್ಧೆಯಲ್ಲಿ ಮತದಾನ ಜಾಗೃತಿ ಮೂಡಿಸುವ ರಂಗೋಲಿಗಳ ಹಾಕಿದ ಸ್ಫರ್ಧಿಗಳಿಗೆ ಪ್ರಥಮ ಸ್ಥಾನ, ದ್ವಿತೀಯ ಹಾಗೂ ತೃತೀಯ ಸ್ಥಾನ ಆಯ್ಕೆ ಮಾಡಿ ಪ್ರಶಸ್ತಿ ಪತ್ರ ನೀಡಲಾಯಿತು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಐಇಸಿ ಸಂಯೋಜಕರು, ತಾಲೂಕ ಕಾರ್ಯಕ್ರಮ ವ್ಯವಸ್ಥಾಪಕರು, ಗ್ರಾಮ ಪಂಚಾಯಿತಿ ಸಿಬ್ಬಂದಿ ವರ್ಗ, ಹಾಗೂ ಶ್ರೀ ನಿಧಿ ಸಂಜೀವಿನಿ ಒಕ್ಕೂಟದ ವ್ಯಾಪ್ತಿಯಡಿ ಬರುವಂತ ಸ್ವ ಸಹಾಯ ಸಂಘದ ಸದಸ್ಯರು ಹಾಗೂ ಒಕ್ಕೂಟದ ಪದಾಧಿಕಾರಿಗಳು ಉಪಸ್ಥಿತರಿದ್ದರು.