ಇಳಕಲ್ – ಕಾರವಾರ ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿ ಮಾಡಿ; ಗಡ್ಕರಿಗೆ ಮಾಜಿ ಮುಖ್ಯಮಂತ್ರಿ , ಸಂಸದ ಬೊಮ್ಮಾಯಿ ಮನವಿ
ಇಳಕಲ್ ಕಾರವಾರ ರಾಜ್ಯ ಹೆದ್ದಾರಿಯನ್ನು ರಾಷ್ಟ್ರೀಯ ಹೆದ್ದಾರಿಯನ್ನಾಗಿ ಮೇಲ್ದರ್ಜೆಗೇರಿಸಲು ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಕ್ಷೇತ್ರದ ಸಂಸದ ಬಸವರಾಜ ಬೊಮ್ಮಾಯಿ ಬುಧವಾರದಂದು ಮನವಿ ಮಾಡಿದ್ದಾರೆ.
ನವದೆಹಲಿಯಲ್ಲಿ ಕೇಂದ್ರ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಬುಧವಾರ ಭೇಟಿ ಮಾಡಿದ ಅವರು, ನಾನು ಕರ್ನಾಟಕದ ಮುಖ್ಯಮಂತ್ರಿ ಕೆಲಸ ಮಾಡಿದ್ದು ಅತ್ಯಂತ ಹೆಮ್ಮೆಯ ಸಂಗತಿಯಾಗಿದೆ.
ನನ್ನ ಅವಧಿಯಲ್ಲಿ ಕರ್ನಾಟಕದಲ್ಲಿ ರಸ್ತೆ ಹಾಗೂ ಹೆದ್ದಾರಿ ಮೂಲ ಸೌಕರ್ಯ ಅಭಿವೃದ್ದಿಯಲ್ಲಿ ಕ್ರಾಂತಿಕಾರಕ ಬದಲಾವಣೆಯಾಗಿದೆ.
ಪ್ರಸ್ತುತ ಇಳಕಲ್ ಕಾರವಾರ ರಾಜ್ಯ ಹೆದ್ದಾರಿಯನ್ನು ರಾಷ್ಟ್ರೀಯ ಹೆದ್ದಾರಿಯನ್ನಾಗಿ ಪರಿವರ್ತಿಸುವುದು ಅಗತ್ಯವಿದೆ.
ಜೊತೆಗೆ, ರೋಣ ತಾಲೂಕಿನ ಗಜೇಂದ್ರಗಡ ರಿಂಗ್ ರಸ್ತೆ ಹಾಗೂ ಗದಗ ರಿಂಗ್ ರಸ್ತೆ ಯೋಜನೆಗಳನ್ನು ಜಾರಿಗೊಳಿಸುವಂತೆ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ಮನವಿ ಮಾಡಿದ್ದಾರೆ.
ಈ ಸಮಯದಲ್ಲಿ ಮಾಜಿ ಸಚಿವ ಸಂಸದ ಡಾ.ಕೆ.ಸುಧಾಕರ್ ಉಪಸ್ಥಿತರಿದ್ದರು.