೨೦೨೪ ರ ಲೋಕಸಭಾ ಚುನಾವಣೆಯ ಬಾಗಲಕೋಟೆಯ ಬಿಜೆಪಿ ಅಭ್ಯರ್ಥಿ ಪಿ.ಸಿ.ಗದ್ದಿಗೌಡರ ಅವರ ಪರವಾಗಿ ಬಹಿರಂಗ ಪ್ರಚಾರಕ್ಕೆ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ 03-05-24 ಶುಕ್ರವಾರ ಸಾಯಂಕಾಲ ೬ ಗಂಟೆಗೆ ಇಳಕಲ್ ನಗರಕ್ಕೆ ಆಗಮಿಸಲಿದ್ದಾರೆ ಎಂದು ಬಿಜೆಪಿ ಇಳಕಲ್ ನಗರ ಮಂಡಳದ ಪ್ರಧಾನ ಕಾರ್ಯದರ್ಶಿ ಸೂಗುರೇಶ ನಾಗಲೋಟಿ ತಿಳಿಸಿದ್ದಾರೆ.
ನಗರದ ಕಂಠಿ ಸರ್ಕಲ್‌ದಲ್ಲಿ ಬಹಿರಂಗ ಸಭೆಯಲ್ಲಿ ಪಾಲ್ಗೊಂಡು ಅಭ್ಯರ್ಥಿ ಪಿ.ಸಿ.ಗದ್ದಿಗೌಡರ ಪರ ಮತಯಾಚನೆ ನಡೆಸಲಿದ್ದಾರೆ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಅಭಿಮಾನಿಗಳು ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.