ಇಂದಿರಾ ಕ್ಯಾಂಟೀನ್ ಕಟ್ಟಡ ಕಾಮಗಾರಿ ಪರಿಶೀಲಿಸಿದ ಶಾಸಕ ಕಾಶಪ್ಪನವರ
ಬಾಗಲಕೋಟ ಜಿಲ್ಲೆಯ ಇಳಕಲ್ದ ಪೋಲಿಸ್ ಠಾಣೆಯ ಹತ್ತಿರದ ನೂತನವಾಗಿ ನಿರ್ಮಾಣವಾಗುತ್ತಿರುವ ಇಂದಿರಾ ಕ್ಯಾಂಟೀನ್
ಕಟ್ಟಡ ಕಾಮಗಾರಿಯನ್ನು ಶಾಸಕ ವಿಜಯಾನಂದ ಕಾಶಪ್ಪನವರ ಬುಧವಾರ ಮಧ್ಯಾಹ್ನ ೧೨ ಗಂಟೆಗೆ ಭೇಟಿ ನೀಡಿ ಕಾಮಗಾರಿಯನ್ನು ಪರಿಶೀಲಿಸಿದರು.
ನಂತರ ಮಾತನಾಡಿದ ಶಾಸಕರು ಕಟ್ಟಡ ಗುಣಮಟ್ಟದಿಂದ ಕೂಡಿರಲಿ ಎಂದು ಗುತ್ತಿಗೆದಾರಿಗೆ ಹೇಳಿದರು.
ಈ ಸಮಯದಲ್ಲಿ ನಗರಸಭೆ ಪೌರಾಯುಕ್ತ ಶ್ರೀನಿವಾಸ ಜಾಧವ, ನಗರಸಭೆ ಸದಸ್ಯರಾದ ಮೌಲೇಶ ಬಂಡಿವಡ್ಡರ,
ಸುರೇಶ ಜಂಗ್ಲಿ,ಅಮೃತ ಬಿಜ್ಜಳ, ಮುಖಂಡರಾದ ವಿಜಯಮಹಾಂತೇಶ ಗದ್ದನಕೇರಿ ಹಾಗೂ ನಗರಸಭೆ ಸಿಬ್ಬಂದಿ ವರ್ಗದವರು ಇದ್ದರು.
ವರದಿ : ಭೀಮಣ್ಣ ಗಾಣಿಗೇರ