ಅಭಿವೃದ್ಧಿ ಕಾರ್ಯ ಕುರಿತು ಸಿಎಂಗೆ ಶಾಸಕ ಕಾಶಪ್ಪನವರ ಮನವಿ
ಇಳಕಲ್ : ಹುನಗುಂದ ವಿಧಾನಸಭಾ ಮತಕ್ಷೇತ್ರದ ಹಲವಾರು ಅಭಿವೃದ್ಧಿ ಯೋಜನೆಗಳ ಪಟ್ಟಿಯನ್ನು
ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷ ಶಾಸಕ ವಿಜಯಾನಂದ ಕಾಶಪ್ಪನವರ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವಿಧಾನಸೌಧದಲ್ಲಿ ಮನವಿ ಅರ್ಪಿಸಿದರು.
ಇಳಕಲ್- ಹುನಗುಂದ ಅವಳಿ ತಾಲೂಕುಗಳಲ್ಲಿ ಆಗಬೇಕಾದ ಕೆಲಸಗಳ ಪಟ್ಟಿಯನ್ನು ಒಂದೊAದಾಗಿ
ಮಾಡಿ ಮುಖ್ಯಮಂತ್ರಿಗಳ ಗಮನ ಸೆಳೆಯುವ ಜೊತೆಗೆ ಸಂಬAಧಿಸಿದ ಸಚಿವರ ಗಮನಕ್ಕೆ ತರಲಾಗಿದೆ ಎಂದು ಅವರು ಪತ್ರಿಕೆಗೆ ತಿಳಿಸಿದ್ದಾರೆ.