dengue cases ಡೆಂಗ್ಯೂ ಪ್ರಕರಣಗಳನ್ನು ತಡೆಗಟ್ಟುವಂತೆ ಅಧಿಕಾರಿಗಳಿಗೆ ಶಾಸಕ ಕಾಶಪ್ಪನವರ ಖಡಕ್ ಸೂಚನೆ
ಇಳಕಲ್ : ನಗರದಲ್ಲಿ ಡೆಂಗ್ಯೂ ಜ್ವರದ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಶಾಸಕ ವಿಜಯಾನಂದ ಕಾಶಪ್ಪನವರ ಅವರು ಡೆಂಗ್ಯೂ ಜ್ವರ ನಿಯಂತ್ರಣ ತರುವ ಕುರಿತು ಅವಳಿ ತಾಲೂಕಿನ ತಾಲೂಕ ಮಟ್ಟದ ಎಲ್ಲಾ ಅಧಿಕಾರಿಗಳ ತುರ್ತು ಪ್ರಗತಿ ಪರಿಶೀಲನೆ ಸಭೆ ತಹಸೀಲ್ದಾರ ಕಾರ್ಯಾಲಯದಲ್ಲಿ ನಡೆಯಿತು.
ಸಾರ್ವಜನಿಕ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿಗಳಿಗೆ, ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಆದಷ್ಟು ಬೇಗನೆ ಡೆಂಗ್ಯೂ ನಿಯಂತ್ರಣಕ್ಕೆ ತನ್ನಿ, ಸ್ವಚ್ಛತೆಯ ಕುರಿತು ಜಾಗೃತಿ ಮೂಡಿಸಿ, ಅಲ್ಲದೆ ಡೆಂಗ್ಯೂ ಜ್ವರ ದ ಕುರಿತು ತಾಲೂಕಿನಾದ್ಯಂತ ಜಾಗೃತಿ ಮೂಡಿಸಿ ಉತ್ತಮ ಚಿಕಿತ್ಸೆ ನೀಡಿ ಎಂದು ಅಧಿಕಾರಿಗಳಿಗೆ ಖಡಕ್ ಸೂಚನೆಯನ್ನು ನೀಡಿದರು.
ಸಭೆಯಲ್ಲಿ ತಹಶೀಲ್ದಾರ ಸತೀಶ್ ಕೂಡಲಗಿ, ತಾಲೂಕಾ ಪಂಚಾಯತಿ ಕಾರ್ಯ ನಿರ್ವಾಹಕ ಅಧಿಕಾರಿ ಮುರಳಿಧರ ದೇಶಪಾಂಡೆ, ನಗರಸಭೆ ಪೌರಾಯುಕ್ತ ಶ್ರೀನಿವಾಸ ಜಾಧವ್, ಮುಖ್ಯ ಡಾ.ಚೇತನಾ ಶ್ಯಾವಿ ಹಾಗೂ ಅವಳಿ ತಾಲೂಕಿನ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.