ಯಂತ್ರಚಾಲಿತ ದ್ವಿ – ಚಕ್ರ ವಾಹನ ವಿತರಿಸಿದ ಶಾಸಕ ವಿಜಯಾನಂದ ಕಾಶಪ್ಪನವರ
ಇಳಕಲ್ : ನಗರದ ತಹಸೀಲ್ದಾರ ಕಚೇರಿಯ ಆವರಣದಲ್ಲಿ ೨೦೨೩ -೨೪ ನೇ ಸಾಲಿನ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಅನುದಾನದಲ್ಲಿ ವಿಕಲಚೇತನರ ಯಂತ್ರಚಾಲಿ ದ್ವಿ ಚಕ್ರ ವಾಹನಗಳ ವಿತರಣಾ ಕಾರ್ಯಕ್ರಮವನ್ನು ಶಾಸಕ ವಿಜಯಾನಂದ ಕಾಶಪ್ಪನವರ ಸೋಮವಾರದಂದು ಮಧ್ಯಾಹ್ನ ೩ ಉದ್ಘಾಟಿಸಿದರು.
ನಂತರ ಮಾತನಾಡಿದ ಅವರು ವಿಕಲಚೇತನರಿಗೆ ಸರಕಾರ ಹಲವಾರು ಯೋಜನೆಗಳನ್ನು ನೀಡಿದ್ದು ಅವುಗಳನ್ನು ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.
ಈ ಸಮಯದಲ್ಲಿ ಇಳಕಲ್ ತಹಸೀಲ್ದಾರ ಸತೀಶ ಕೂಡಲಗಿ, ಹುನಗುಂದ ತಹಸೀಲ್ದಾರ ನಿಂಗಪ್ಪ ಬಿರಾದಾರ, ತಾಲೂಕಾ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಮುರಳಿಧರ ದೇಶಪಾಂಡೆ, ನಗರಸಭೆ ಸದಸ್ಯ ಶ್ರೀನಿವಾಸ ಜಾಧವ, ಹಸೀನಾಬಾನು ಹವಲ್ದಾರ, ಆಶಾದೀಪಾ ಸೇವಾ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ರಘು ಹುಬ್ಬಳ್ಲಿ, ಮಾಜಿ ಶಾಸಕಿ ಗೌರಮ್ಮ ಕಾಶಪ್ಪನವರ ಮತ್ತು ತಾಲೂಕಾಡಳಿತ ಸಿಬ್ಬಂದಿ ಉಪಸ್ಥಿತರಿದ್ದರು.
ವರದಿ : ಭೀಮಣ್ಣ ಗಾಣಿಗೇರ