ಉಜ್ಜಯಿನಿ ಪೀಠದ ಶ್ರೀಗಳನ್ನು ಭೇಟಿ ಮಾಡಿದ ಶಾಸಕ ವಿಜಯಾನಂದ ಕಾಶಪ್ಪನವರ
ವಿಜಯನಗರ ಜಿಲ್ಲೆಯ ಕೊಟ್ಟೂರು ತಾಲೂಕಿನ ಉಜ್ಜಯಿನಿ ಪೀಠದ ಶ್ರೀಮದ್ ಉಜ್ಜಯಿನಿ ಸದ್ಧರ್ಮ ಸಿಂಹಾಸನಾಥೇಶ್ವರ ಶ್ರೀಶ್ರೀಶ್ರೀ ೧೦೦೮ ಜಗದ್ಗುರು ಅಭಿನವ ಸಿದ್ದಲಿಂಗ ರಾಜದೇಶಿಕೇಂದ್ರ ಶಿವಾಚಾರ್ಯ ಮಹಾಸ್ವಾಮಿಗಳನ್ನು
ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಶಾಸಕ ವಿಜಯಾನಂದ ಕಾಶಪ್ಪನವರ ಅವರು ಭೇಟಿ ಮಾಡಿದರು.

ನಂತರ ಶ್ರೀ ಜಗದ್ಗುರು ಮಹಾ ಸನ್ನಿಧಿಯವರ ಆಶೀರ್ವಾದ ಪಡೆದುಕೊಂಡು ಶ್ರೀಗಳೊಂದಿಗೆ ಕೆಲಕಾಲ ಪ್ರಸ್ತುತ ವಿದ್ಯಮಾನಗಳ ಬಗ್ಗೆ ಚರ್ಚೆಯನ್ನು ನಡೆಸಿದರು.
ಶಾಸಕರನ್ನು ಶ್ರೀಗಳು ಸತ್ಕರಿಸಿದರು. ಈ ಸಮಯದಲ್ಲಿ ಜಿಲ್ಲಾ ಪಂಚಾಯತ ಮಾಜಿ ಸದಸ್ಯ ಮಹಾಂತೇಶ ನರಗುಂದ ಇದ್ದರು.
ವಿಡಿಯೋ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ






