nutritious food distribution ವಿದ್ಯಾರ್ಥಿಗಳಿಗೆ ಪೂರಕ ಪೌಷ್ಠಿಕ ಆಹಾರ ವಿತರಣಾ ಸಮಾರಂಭ ಉದ್ಘಾಟಿಸಿದ ಶಾಸಕ ವಿಜಯಾನಂದ ಕಾಶಪ್ಪನವರ
ಹುನಗುಂದ : ಕರ್ನಾಟಕ ಪಬ್ಲಿಕ್ ಸ್ಕೂಲ್ ಧನ್ನೂರ ಹಾಗೂ ಕರ್ನಾಟಕ ಸರಕಾರ ಮತ್ತು ಅಜೀಮ್ ಪ್ರೇಮ್‌ಜಿ ಪೌಂಡೇಶನ ಇವರ ಸಂಯುಕ್ತ ಆಶ್ರಯದಲ್ಲಿ
ಪ್ರಾಥಮಿಕ ಹಾಗೂ ಪ್ರೌಢ ವಿಭಾಗದ ಮಕ್ಕಳಿಗೆ ವಾರದ ಮೂರು ದಿನ ಮೊಟ್ಟೆ, ಶೆಂಗಾ ಚಿಕ್ಕಿ, ಬಾಳೆಹಣ್ಣು ವಿತರಣಾ ಸಮಾರಂಭವನ್ನು ಶಾಸಕ ವಿಜಯಾನಂದ ಕಾಶಪ್ಪನವರ ಸೆ.೩೦ ಸೋಮವಾರ ಮಧ್ಯಾಹ್ನ ೩ ಗಂಟೆಗೆ ಉದ್ಘಾಟಿಸಿದರು.
ಈ ಸಮಯದಲ್ಲಿ ಮಾತನಾಡಿದ ಅವರು ಸರಕಾರ ವಿದ್ಯಾರ್ಥಿಗಳಿಗೆ ಹಲವಾರು ಹೊಸ ಹೊಸ ಯೋಜನೆಗಳನ್ನು ಜಾರಿಗೆ ತರುತ್ತಿದು ಅದನ್ನು ವಿದ್ಯಾರ್ಥಿಗಳು ಸದುಪಯೋಗ ಪಡಿಸಿಕೊಂಡು ಉತ್ತಮವಾಗಿ ವಿದ್ಯಾಭ್ಯಾಸ ಮಾಡಿ ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಗಳಿಸಿ ಶಾಲೆ ಮತ್ತು ತಂದೆ ತಾಯಿಗಳ ಹೆಸರನ್ನು ತರಬೇಕು ಎಂದು ಕರೆ ಕೊಟ್ಟರು.
ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಜಾಸ್ಮೀನ ಕಿಲ್ಲೇದಾರ, ತಾಲೂಕಾ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಮುರಳಿಧರ ದೇಶಪಾಂಡೆ ಅಜೀಮ್ ಪ್ರೇಮ್‌ಜಿ ಪೌಂಡೇಶನ್ ಸಂಚಾಲಕರು ಹಾಗೂ ಕರ್ನಾಟಕ ಪಬ್ಲಿಕ್ ಸ್ಕೂಲ್ ಮುಖ್ಯಗುರುಗಳು ಮತ್ತು ಸಿಬ್ಬಂದಿ ವರ್ಗದವರು ಇದ್ದರು.
ವರದಿ : ಭೀಮಣ್ಣ ಗಾಣಿಗೇರ (ಇಳಕಲ್ಲ)