Murder of a person in Kardi village: SP Amarnath Reddy visited the place Murder : ಕರಡಿ ಗ್ರಾಮದಲ್ಲಿ ವ್ಯಕ್ತಿಯೋರ್ವನ ಕೊಲೆ : ಸ್ಥಳಕ್ಕೆ ಎಸ್‌ಪಿ ಅಮರನಾಥ ರೆಡ್ಡಿ ಭೇಟಿ
Murder : ಕರಡಿ ಗ್ರಾಮದಲ್ಲಿ ವ್ಯಕ್ತಿಯೋರ್ವನ ಕೊಲೆ : ಸ್ಥಳಕ್ಕೆ ಎಸ್‌ಪಿ ಅಮರನಾಥ ರೆಡ್ಡಿ ಭೇಟಿ
ಕುರಿಗಾಹಿ ವ್ಯಕ್ತಿಯೊಬ್ಬನನ್ನು ಅಮಾನುಷವಾಗಿ ಕೊಲೆ ಮಾಡಿರುವ ಪ್ರಕರಣ ಇಳಕಲ್ ಗ್ರಾಮೀಣ ಪೋಲಿಸ್ ಠಾಣೆಯ ವ್ಯಾಪ್ತಿಯಲ್ಲಿನ ಕರಡಿ ಗ್ರಾಮದಲ್ಲಿ ನಡೆದಿದೆ.
ಬಾಗಲಕೋಟ ಜಿಲ್ಲೆಯ ಇಳಕಲ್ ತಾಲೂಕಿನ ನಂದವಾಡಗಿ ಗ್ರಾಮದ ಬಸವರಾಜ ಮಲ್ಲಪ್ಪ ವಗ್ಗರ ವಯಸ್ಸು ೩೩ ಕರಡಿ ಗ್ರಾಮದಲ್ಲಿ ಪತ್ನಿಯ ಮನೆಯಲ್ಲಿ ವಾಸವಾಗಿದ್ದನು. ಎಂದಿನ0ತೆ ಕುರಿಗಳನ್ನು ಹೊಲದಲ್ಲಿನ ಕೊಟ್ಟಿಗೆಯಲ್ಲಿ ಕಟ್ಟಿ ಮನೆಗೆ ವಾಪಸ್ಸು ಹೋಗುತ್ತಿದ್ದಾಗ ಅಲ್ಲಿಯೇ ಬರುವ ಹಳ್ಳದಲ್ಲಿ ಬಸವರಾಜ ಅಮಾನುಷವಾಗಿ ಕೊಲೆಯಾಗಿದ್ದಾನೆ ಎನ್ನಲಾಗಿದೆ.
ಘಟನಾ ಸ್ಥಳಕ್ಕೆ ಇಳಕಲ್ ಗ್ರಾಮೀಣ ಪೋಲಿಸ್ ಠಾಣೆಯ ಪಿಎಸ್‌ಐ ಮಲ್ಲು ಸತ್ತಿಗೌಡರ, ಸಿಪಿಐ ಸುನೀಲ ಸವದಿ,ಬಾಗಲಕೋಟ ಪೋಲಿಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ತನಿಖೆಯನ್ನು ನಡೆಸಿದ್ದಾರೆ. ( ಕೊಲೆಗೆ ಕಾರಣ ಇನ್ನೂ ತಿಳಿದು ಬಂದಿಲ್ಲ ಎನ್ನಲಾಗಿದೆ)