ನಾಗೂರ ಗ್ರಾಮದಲ್ಲಿ ಕೂಲಿ ಕಾರ್ಮಿಕರ ಆರೋಗ್ಯ ತಪಾಸಣೆ ಯಶಸ್ವಿ
ಬಾಗಲಕೋಟ ಜಿಲ್ಲೆಯ ಇಳಕಲ್ ತಾಲೂಕಿನ ನಾಗೂರ ಗ್ರಾಮದಲ್ಲಿ ಕೂಲಿ ಕಾರ್ಮಿಕರ ಆರೋಗ್ಯ ತಪಾಸಣೆ ಗುರುವಾರದಂದು ನಡೆಯಿತು.
ಜಿಲ್ಲಾ ಪಂಚಾಯತ್ ಬಾಗಲಕೋಟೆ ತಾಲೂಕ ಪಂಚಾಯತ್ ಹನುಗುಂದ ಗ್ರಾಮ ಪಂಚಾಯತ್ ನಾಗುರ ಇದರ ಸಹಯೋಗದಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಕೂಲಿ ಕಾರ್ಮಿಕರ ಆರೋಗ್ಯ ತಪಾಸಣಾ ಶಿಬಿರ ನಡೆಯಿತು. ತಪಾಸಣೆಯಲ್ಲಿ ೩೩೬ ಜನರ ಆರೋಗ್ಯ ತಪಾಸಣೆ ಮಾಡಿಕೊಂಡರು.
ಕಾರ್ಯಕ್ರಮದಲ್ಲಿಆರೋಗ್ಯ ಇಲಾಖೆ ಸಿಬ್ಬಂದಿ ಹಾಗೂ ಗ್ರಾಮ ಪಂಚಾಯಿತಿ ಸಿಬ್ಬಂದಿ ಭಾಗವಹಿಸಿದ್ದರು.