Narendra Modi ಭಾರತದ ಪ್ರಧಾನಿ ಹುದ್ದೆಗೆ ರಾಜಿನಾಮೆ ಸಲ್ಲಿಸಿದ ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿ ಅವರು ಸಚಿವ ಸಂಪುಟದೊಂದಿಗೆ ಬುಧವಾರ ರಾಷ್ಟ್ರಪತಿ ದ್ರೌಪತಿ ಮುರ್ಮು ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ.
ರಾಜಿನಾಮೆ ಸಲ್ಲಿಸಿದ ಪ್ರಧಾನಿ ಮೋದಿ ನವದೆಹಲಿ ರಾಷ್ಟ್ರಪತಿಗಳು ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ ಮತ್ತು ಹೊಸ ಸರ್ಕಾರ ಅಧಿಕಾರ ವಹಿಸಿಕೊಳ್ಳುವವರೆಗೂ ನರೇಂದ್ರ ಮೋದಿ ಮತ್ತು ಸಚಿವ ಸಂಪುಟವನ್ನು ಮುಂದುವರಿಸಲು ವಿನಂತಿಸಿದ್ದಾರೆ” ಎಂದು ಪತ್ರಿಕಾ ಪ್ರಕಟಣೆ ತಿಳಿಸಿದೆ.
ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ!
ಜೂನ್ 8 ರ ಸಂಜೆ ಪ್ರಧಾನಿ ಮೋದಿ ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಯಿದೆ.ಎನ್ಡಿಎ ಬಹುಮತದ ಮಟ್ಟವನ್ನು ದಾಟಿ 292 ಸ್ಥಾನಗಳನ್ನು ಗೆದ್ದುಕೊಂಡಿವೆ, ಆದರೆ ಬಿಜೆಪಿ ತನ್ನದೇ ಆದ ಬಹುಮತದ ಕೊರತೆಯನ್ನು ಎದುರಿಸಿತ್ತಿದೆ.
ಎನ್ಡಿಎ ಸರ್ಕಾರ ರಚನೆಯಾದರೆ, ಮಾಜಿ ಪ್ರಧಾನಿ ಜವಾಹರಲಾಲ್ ನೆಹರೂ ನಂತರ ಮೂರನೇ ಬಾರಿಗೆ ಅಧಿಕಾರವನ್ನು ಉಳಿಸಿಕೊಂಡ ಎರಡನೇ ಪ್ರಧಾನಿ ಯಾಗಲಿದ್ದಾರೆ.