ಪೋಲಿಸರೆಂದರೆ ಭಯ ಬೇಡ : ಸಿಪಿಐ ಸುನೀಲ ಸವದಿ
ಹುನಗುಂದ: ಪೊಲೀಸರೆಂದರೆ ಭಯ ಬೇಡ, ಸಾರ್ವಜನಿಕರ ಸಹಕಾರಿಂದ ಕಾನೂನು ರಕ್ಷಣೆ ಮಾಡಲು ಸಾಧ್ಯ. ಮಕ್ಕಳಲ್ಲಿ ಪೊಲೀಸರೆಂದರೆ ಸಾಮಾನ್ಯವಾಗಿ ಭಯವಿರುತ್ತದೆ, ಇಂಥ ಭಯ ಹೋಗಲಾಡಿಸಿ, ಮಕ್ಕಳ ಹಕ್ಕುಗಳಿಗೆ ಚ್ಯುತಿ ಬಂದಾಗ ಅಥವಾ ರಕ್ಷಣೆಯ ಅವಶ್ಯಕತೆ ಇದ್ದಾಗ ಪೊಲೀಸರ ಸಹಾಯ ಪಡೆಯಲು ಮಕ್ಕಳ ಸ್ನೇಹಿಯಾಗಿ ಕರ್ತವ್ಯ ನಿರ್ವಹಿಸಲು ಇಲಾಖೆ ಸದಾ ಕಾಲ ಸನ್ನದ್ದವಾಗಿರುತ್ತದೆ ಎಂದು ಹುನಗುಂದ ಸಿಪಿಐ ಸುನೀಲ ಸವದಿ ಹೇಳಿದರು.
ಪಟ್ಟಣದ ಪೊಲೀಸ್ ಠಾಣೆಯಲ್ಲಿ ಗುರುವಾರ ಹಮ್ಮಿಕೊಂಡಿದ್ದ ಮಕ್ಕಳಿಗಾಗಿ ತೆರೆದ ಮನೆ ಕಾರ್ಯಕ್ರಮದಲ್ಲಿ ಪೋಲಿಸ್ ಇಲಾಖೆಯ ಕರ್ತವ್ಯ, ಜವಾಬ್ದಾರಿ, ಕಾನೂನು ಮತ್ತಿತರ ವಿಷಯಗಳ ಕುರಿತು ಮಾತನಾಡಿದ ಅವರು ಶಾಲಾ ಮಕ್ಕಳಲ್ಲಿ ಕಾನೂನು ಜಾಗೃತಿ, ಸಂಚಾರ ನಿಯಮಗಳ ಪಾಲನೆ, ಅವುಗಳ ಉಲ್ಲಂಘನೆ ಯಿಂದ ಎದುರಿಸಬೇಕಾದ ದಂಡ ಹಾಗೂ ಶಿಕ್ಷೆ ಬಗ್ಗೆ ಮಾಹಿತಿ, ಮಕ್ಕಳ ಮೇಲಿನ ದೌರ್ಜನ್ಯ, ಬಾಲಕಾರ್ಮಿಕ ಪದ್ಧತಿ, ಬಾಲ್ಯವಿವಾಹ, ಸರಗಳವು, ಸೈಬರ್ ಕ್ರೆöÊ, ಯಾವುದೇ ಕಚೇರಿಯಲ್ಲಿ ಅಧಿಕಾರಿಗಳು ಕೆಲಸ ಮಾಡದಿದ್ದಲ್ಲಿ ಅವರಿಗೆ ರೈಟಿಂಗ್‌ನಲ್ಲಿ ಬರೆದು ಕೊಡಬೇಕು ಎಂದು ಅವರಿಗೆ ಹೇಳಬೇಕು ಅಂದಾಗ ಮಾತ್ರ ಜಬಾಬ್ದಾರಿಯಿಂದ ಸರಿಯಾಗಿ ಕೆಲಸವನ್ನು ಮಾಡುತ್ತಾರೆ.ಅನೇಕ ವಿಚಾರಗಳ ಬಗ್ಗೆ ಪೊಲೀಸರ ಕುರಿತು ಶಾಲಾ ಮಕ್ಕಳಲ್ಲಿ ಜಾಗೃತಿ ಮೂಡಿಸಿದರು. ಯಾವುದೇ ಅಪಾಯಕಾರಿ ಸಂದರ್ಭದಲ್ಲಿ ಪೊಲೀಸ್ ಸಹಾಯವಾಣಿಗೆ ಕರೆ ಮಾಡಬಹುದು ಎಂದು ಪೊಲೀಸರು ತಿಳಿಸಿದರು.
ವಿದ್ಯಾರ್ಥಿ ದಿಸೆಯಲ್ಲಿ ಉತ್ತಮ ಗುರಿಯಿಟ್ಟುಕೊಂಡು ಮುನ್ನಡೆದರೆ ಉಜ್ವಲ ಭವಿಷ್ಯ ರೂಪಿಸಿಕೊಳ್ಳಬಹುದು, ಕಾನೂನಿನ ಬಗ್ಗೆ ವಿದ್ಯಾರ್ಥಿಗಳು ಹೆಚ್ಚು ಅರಿವು ಮೂಡಿಸಿಕೊಳ್ಳಬೇಕು ತಮ್ಮ ಪಾಲಕರಿಗೂ ಈ ಬಗ್ಗೆ ತಿಳಿಸಿಕೊಡಬೇಕು ಎಂದು ಸಲಹೆ ನೀಡಿದರು.






