
Postal employees protest ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಅಂಚೆ ನೌಕರರಿಂದ ಪ್ರತಿಭಟನೆ
ಅಖಿಲ ಭಾರತ ಅಂಚೆ ನೌಕರರು ಹಾಗೂ ಗ್ರಾಮೀಣ ಅಂಚೆ ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಇಂದು
ಬಾಗಲಕೋಟೆಯಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.ಅಖಿಲ ಭಾರತ ಅಂಚೆ ನೌಕರರು ಗ್ರಾಮೀಣ ಅಂಚೆ ನೌಕರರ
ಸಂಘ ಸೇರಿ ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕೇಂದ್ರ ಸರಕಾರದ ವಿರುದ್ಧ ಇಂದು ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.
ಬಾಗಲಕೋಟೆಯ ಮುಖ್ಯ ಅಂಚೆ ಇಲಾಖೆಯ ಎದುರು ನೌಕರರು ಪ್ರತಿಭಟನೆ ಹಮ್ಮಿಕೊಂಡಿದ್ದರು. ತಮ್ಮ ವಿವಿಧ ಬೇಡಿಕೆಗಳನ್ನು
ಈಡೇರಿಸುವಂತೆ ಕೇಂದ್ರ ಸರಕಾರದ ವಿರುದ್ಧ ಘೋಷಣೆ ಕೂಗಿದರು. ಅಖಿಲ ಭಾರತ ಗ್ರಾಮೀಣ ಅಂಚೆ ನೌಕರರು ಕೂಡ
ಬಾಗಲಕೋಟೆಯಲ್ಲಿ ಒಟ್ಟಾಗಿ ಸೇರಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ವರದಿ:- ರಾಜೇಶ್.ಎಸ್.ದೇಸಾಯಿ ಬಾಗಲಕೋಟೆ





