ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಖಂಡಿಸಿ ಪ್ರತಿಭಟನೆ; ಬೆಂಕಿ ತಗುಲಿ ಇಬ್ಬರಿಗೆ ಗಾಯ
ಬಾಗಲಕೋಟ : ಮೂಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಶನ್ ಗೆ ರಾಜ್ಯಪಾಲರು
ಅನುಮತಿ ನೀಡಿರುವುದನ್ನು ಖಂಡಿಸಿ ಬಾಗಲಕೋಟ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ
ನಡೆದ ಬೃಹತ್ ಪ್ರತಿಭಟನೆಯಲ್ಲಿ ಟೈಯರ್‌ಗೆ ಬೆಂಕಿ ಹಚ್ಚಿ ಕೇಂದ್ರ ನಾಯಕರ ಭಾವಚಿತ್ರಗಳಿಗೆ ಚಪ್ಪಲಿ ಏಟುಗಳನ್ನು
ಹಾಕಿ ಆಕ್ರೋಶವನ್ನು ವ್ಯಕ್ತಪಡಿಸುತ್ತಿರುವಾಗ ಕಾಂಗ್ರೆಸ್ ಕಾರ್ಯಕರ್ತರಿಗೆ ಬೆಂಕಿ ತಗುಲಿದ ಘಟನೆ ನಡೆದಿದೆ.
ಬೆಂಕಿ ತಗುಲಿದ ಕಾರ್ಯಕರ್ತರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ವ್ಯಕ್ತಿಗೆ ಮೈಗೆ
ಹಾಗೂ ಕೈ ಸುಟ್ಟಿದೆ ಇನ್ನೊಬ್ಬರಿಗೆ ಸ್ವಲ್ಪ ಕಾಲು ಸುಟ್ಟಿದೆ ಎನ್ನಲಾಗಿದೆ.