ರಾಮೇಶ್ವರಂ ಕೆಫೆಸ್ಫೋಟ: ಜೈಲಿನಲ್ಲಿದ್ದ ಐಸಿಸ್ ಉಗ್ರ ಮುನೀರ್ ಎನ್‌ಐಎ ವಶಕ್ಕೆ
ಶಿವಮೊಗ್ಗ ಪ್ರಕರಣಕ್ಕೂ, ಬೆಂಗೂರು ಪ್ರಕರಣಕ್ಕೂ ಸಾಮ್ಯತೆ
ಬೆಂಗಳೂರು: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದಲ್ಲಿ ಶಿವಮೊಗ್ಗ ಪ್ರಾಯೋಗಿಕ ಬಾಂಬ್ ಸ್ಪೋಟ ಪ್ರಕರಣದ ಮಾಜ್ ಮುನೀರ್ ಅಹ್ಮದ್(26) ನನ್ನು ಎನ್‌ಐಎ ಅಧಿಕಾರಿಗಳು 7 ದಿನಗಳ ಕಾಲ ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ. ಶಿವಮೊಗ್ಗ ತುಂಗ ನದಿ ತೀರದಲ್ಲಿ 2ವರ್ಷಗಳ ಹಿಂದೆ ನಡೆದಿದ್ದ ಪ್ರಾಯೋಗಿಕ ಬಾಂಬ್ ಸ್ಫೋಟ ಪ್ರಕರಣಕ್ಕೂ ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಸ್ಫೋಟ ಪ್ರಕರಣದ ಸಂಚಿಗೂ ಸಾಮ್ಯತೆ ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ ಪ್ರಾಯೋಗಿಕ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಮಾಜ್ ಮುನೀರ್‌ನನು ಬಾಡಿ ವಾರೆಂಟ್ ಮೂಲಕ 7 ದಿನಗಳ ವಶಕ್ಕೆ ನೀಡುವಂತೆ ಎನ್‌ಐಎ ಪರ ಹಿರಿಯ ಸರ್ಕಾರಿ ಅಭಿಯೋಜಕ ಪಿ.ಪ್ರಸನ್ನ ಕುಮಾರ ಅಅರ್ಜಿ ಸಲ್ಲಿಸಿದ್ದರು. ಅದಕ್ಕೆ ಕೋರ್ಟ್ ಅನುಮತಿ ನೀಡಿತ್ತು.
ಈ ಹಿನ್ನೆಲೆಯಲ್ಲಿ ಆರೋಪಿ ಮಾಜ್ ಮುನೀರ್ ಅಹ್ಮದ್ ನನ್ನು ವಶಕ್ಕೆ ಪಡೆದುಕೊಂಡು ರಹಸ್ಯ ಸ್ಥಳದಲ್ಲಿ ವಿಚಾರಣೆ ನಡೆಸುತ್ತಿದ್ದಾರೆ. ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಮಾಜ್ಮುನೀರ್, ಎಂಜಿನಿಯರಿಂಗ್ ಪದವೀಧರ. ಭಯೋತ್ಪಾದನಾ ಸಂಘಟನೆಗಳ ಪರವಾಗಿ ಮಂಗಳೂರಿನಲ್ಲಿ ಗೋಡೆ ಬರಹ ಬರೆದಿದ್ದ ಪ್ರಕರಣ ಹಾಗೂ ಶಿವಮೊಗ್ಗದ ತುಂಗಾ ನದಿ ತೀರದಲ್ಲಿ ಪ್ರಾಯೋಗಿಕ ಬಾಂಬ್ ಸ್ಫೋಟ ಪ್ರಮುಖಪ್ರಕರಣದ ಆರೋಪಿಯಾಗಿದ್ದಾನೆ.