ಜನರಿಗೆ ಎಸ್. ಆರ್. ಪಿ ಆಸ್ಪತ್ರೆ ಅನುಕೂಲ: ಜಿ. ಪರಮೇಶ್ವರ
ಬಾಡಗಂಡಿ : ಆರೋಗ್ಯ ದೃಷ್ಠಿಯಿಂದ ಗ್ರಾಮೀಣ ಭಾಗದ ಜನರಿಗೆ ಅನುಕೂಲವಾಗಲು ಎಸ್. ಆರ್. ಪಾಟೀಲ
ಅವರು ವೈದ್ಯಕೀಯ ಮಹಾವಿದ್ಯಾಲಯ, ಆಸ್ಪತ್ರೆ ಹಾಗೂ ಸಂಶೋಧನಾ ಕೇಂದ್ರ ಬಾಡಗಂಡಿಯಲ್ಲಿ ಮಾಡಿದ್ದು
ಸ್ತುತ್ಯಾರ್ಹವಾಗಿದೆಂದು ಗೃಹ ಸಚಿವ ಜಿ. ಪರಮೇಶ್ವರ ಹೇಳಿದರು,
ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಬಾಡಗಂಡಿ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಗ್ರಾಮೀಣ
ಮಕ್ಕಳು ಶಿಕ್ಷಣ ಪಡೆಯಲು ಎಲ್ಲ ವ್ಯವಸ್ಥೆಯನ್ನು ಕಲ್ಪಿಸಿದ್ದಾರೆ. ಇಂತಹ ವೈದ್ಯಕೀಯ ಸೌಲಭ್ಯಗಳನ್ನು ಜನರು,
ಸದುಪಯೋಗ ಪಡಿಸಿಕೊಳ್ಳಲು ತಿಳಿಸಿದರು.






