Hunagunda Police Station ಸಂಗಮೇಶ್ವರ ಜಾತ್ರಾ ಮಹೋತ್ಸವ ಹಿನ್ನಲೆ : ಹುನಗುಂದ ಪೋಲಿಸ್ ಠಾಣೆಯಲ್ಲಿ ಶಾಂತಿ ಸಮಿತಿ ಸಭೆ
ಬಾಗಲಕೋಟ ಜಿಲ್ಲೆಯ ಹುನಗುಂದ ಪಟ್ಟಣದ ಶಹರ್ ಪೋಲಿಸ್ ಠಾಣೆಯಲ್ಲಿ ಸೆಪ್ಟಂಬರ್ ೦೨ ರಂದು ನಡೆಯಲಿರುವ
ಸಂಗಮೇಶ್ವರ ಜಾತ್ರಾ ಮಹೋತ್ಸವದ ಹಿನ್ನಲೆ ಶಾಂತಿ ಸಮಿತಿ ಸಭೆ ಜರುಗಿತು.
ಸಭೆಯ ಅಧ್ಯಕ್ಷತೆಯನ್ನು ಪಿಎಸ್‌ಐ ಚನ್ನಯ್ಯ ದೇವೂರ ಮಾತನಾಡಿ ಜಾತ್ರೆಯನ್ನು ಸಡಗರ ಸಂಭ್ರಮದಿಂದ ನಾವು
ನೀವು ಎಲ್ಲರೂ ಸೇರಿಕೊಂಡು ಸಡಗರದಿಂದ ಆಚರಿಸೋಣ ಜಾತ್ರಾ ಸಮಯದಲ್ಲಿ ಯಾವುದೇ ರೀತಿಯ ಅನಾಹುತಗಳನ್ನು
ನಡೆಯದಂತೆ ಜಾತ್ರಾ ಮಹೋತ್ಸವವನ್ನು ಆಚರಿಸುವಂತೆ ಕರೆ ನೀಡಿದರು. ಈ ಸಮಯದಲ್ಲಿ ಪಟ್ಟಣದ ಹಿರಿಯ ಮುಖಂಡರು
ಮತ್ತು ಶಾಂತಿ ಸಮಿತಿಯ ಸದಸ್ಯರು ತಮ್ಮ ತಮ್ಮ ಅನಿಸಿಕೆಗಳನ್ನು ತಿಳಿಸಿದರು.