BJP ಬಿಜೆಪಿಯ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ಆಸ್ಪತ್ರೆಗೆ ದಾಖಲು
ಅನಾರೋಗ್ಯದ ಕಾರಣ ಮತ್ತೆ ದೆಹಲಿಯ ಅಪೋಲೊ ಆಸ್ಪತ್ರೆಗೆ ಬಿಜೆಪಿಯ ಹಿರಿಯ ನಾಯಕ ಎಲ್‌ಕೆ ಅಡ್ವಾಣಿ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸದ್ಯ 96 ವರ್ಷದ ಅಡ್ವಾಣಿಯವರ ಆರೋಗ್ಯ ಸ್ಥಿರವಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಇರಿಸಿ, ಅವರನ್ನು ನರರೋಗ ತಜ್ಞ ಡಾ. ವಿನಿತ್ ಅವರು ನೋಡಿಕೊಳ್ಳುತ್ತಿದ್ದಾರೆ. ಜುಲೈನಲ್ಲಿ ಅಪೋಲೊ ಆಸ್ಪತ್ರೆಗೆ ದಾಖಲಾಗುವ ಮೊದಲು ಅಡ್ವಾಣಿ ಅವರು ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಕೂಡ ದಾಖಲಾಗಿದ್ದರು.