
ಹುನಗುಂದ ಪಟ್ಟಣದ ಶ್ರೀ ವಿಜಯ ಮಹಾಂತೇಶ ಸಹಕಾರಿ ಬ್ಯಾಂಕ್ ನ ನೂತನ ಅಧ್ಯಕ್ಷರಾಗಿ ಶಿವಾನಂದ ಕಂಠಿ ಆಯ್ಕೆ
ಬಾಗಲಕೋಟ ಜಿಲ್ಲೆಯ ಪ್ರತಿಷ್ಠಿತ ಹಣಕಾಸು ಸಂಸ್ಥೆಗಳಲ್ಲಿ ಒಂದಾದ ಹುನಗುಂದ ಪಟ್ಟಣದ ಶ್ರೀ ವಿಜಯ ಮಹಾಂತೇಶ ಸಹಕಾರಿ ಬ್ಯಾಂಕ್ ನ ನೂತನ ಅಧ್ಯಕ್ಷರಾಗಿ ಶಿವಾನಂದ ಕಂಠಿ ಉಪಾಧ್ಯಕ್ಷ ರಾಗಿ ಅನ್ನಪೂರ್ಣ ಶರಣಪ್ಪ ಹೊಸೂರ ಅವಿರೋಧವಾಗಿ ಆಯ್ಕೆಯಾದರು ಎಂದು ಹಿಂದಿನ ಅಧ್ಯಕ್ಷ ರವಿ ಹುಚನೂರ ಸೋಮವಾರದಂದು ಮಧ್ಯಾಹ್ನ ೧೨ ಗಂಟೆಗೆ ತಿಳಿಸಿದ್ದಾರೆ.

ನೂತನ ಅಧ್ಯಕ್ಷರಿಗೆ ಉಪಾಧ್ಯಕ್ಷರಿಗೆ ಬ್ಯಾಂಕಿನ ನಿರ್ದೇಶಕರು ಶಾಲು ಹೊದಿಸಿ ಸತ್ಕರಿಸಿದರು. ಈ ಸಂದರ್ಭದಲ್ಲಿ ಬ್ಯಾಂಕಿನ ನಿರ್ದೇಶಕರು ಮತ್ತು ಪ್ರಧಾನ ವ್ಯವಸ್ಥಾಪಕರು ಉಪಸ್ಥಿತರಿದ್ದರು.
ವರದಿ : ಭೀಮಣ್ಣ ಗಾಣಿಗೇರ (ಇಳಕಲ್ಲ)





