
Smart class ಸ್ಮಾರ್ಟ್ ಕ್ಲಾಸ್ ಹಾಗೂ ಗಣಕಯಂತ್ರ ಉದ್ಘಾಟಿಸಿದ ಶಾಸಕ ಕಾಶಪ್ಪನವರ
ಬಾಗಲಕೋಟ : ಜಿಲ್ಲೆಯ ಹುನಗುಂದ ತಾಲೂಕಿನ ಧನ್ನೂರ ಗ್ರಾಮದ ಕರ್ನಾಟಕ ಪಬ್ಲಿಕ್ ಸ್ಕೂಲ್‌ದಲ್ಲಿ ನಡೆದ ಸ್ಮಾರ್ಟ್ ಕ್ಲಾಸ್ ಹಾಗೂ ಗಣಕಯಂತ್ರ ಉದ್ಘಾಟನಾ ಸಮಾರಂಭವನ್ನು ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಶಾಸಕ ವಿಜಯಾನಂದ ಕಾಶಪ್ಪನವರ ಸೋಮವಾರದಂದು ಉದ್ಘಾಟಿಸಿದರು.
ಈ ಸಮಯದಲ್ಲಿ ಮಾತನಾಡಿದ ಅವರು ವಿದ್ಯಾರ್ಥಿಗಳು ಓದಿನತ್ತ ಹೆಚ್ಚು ಗಮನಹರಿಸುತ್ತಾ ದೊಡ್ಡದೊಡ್ಡ ಅಧಿಕಾರಿಗಳಾಗಿ ಹೊರಹೊಮ್ಮಿ ಶಾಲೆ ಮತ್ತು ನಿಮ್ಮ ತಂದೆ ತಾಯಿಗಳ ಹೆಸರನ್ನು ತರಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಕಾಲೇಜು ಸಮಿತಿಯ ಸದಸ್ಯರು, ಗ್ರಾಮ ಪಂಚಾಯತ್ ಅಧ್ಯಕ್ಷರು ಹಾಗೂ ಸದಸ್ಯರು ಸೇರಿದಂತೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ವರದಿ : ಭೀಮಣ್ಣ ಗಾಣಿಗೇರ ವಿಡಿಯೋ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ





