ಎಬಿಟಿ ಗುರುಕುಲದಲ್ಲಿ ಶಿಕ್ಷಕರ ದಿನ ಆಚರಣೆ
ಬಾಗಲಕೋಟ ಜಿಲ್ಲೆಯ ಇಳಕಲ್‌ದ ತಾಲೂಕಿನ ನಂದವಾಡಗಿ ಗ್ರಾಮದ ಎಬಿಟಿ ಗುರುಕುಲದಲ್ಲಿ
ಗುರುವಾರದಂದು ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು.
ಡಾ.ಸರ್ವಪಲ್ಲಿ ರಾಧಾಕೃಷ್ಣನರವರ ಭಾವಚಿತ್ರಕ್ಕೆ ಡಾ. ಅಭಿನವ ಚೆನ್ನಬಸವ ಶಿವಾಚಾರ್ಯರು
ಪುಪ್ಪ ನಮನ ಸಲ್ಲಿಸುವ ಮೂಲಕ ಜಯಂತಿಯನ್ನು ಆಚರಿಸಿಲಾಯಿತು.
ನಂತರ ಶಾಲೆಯ ಮಕ್ಕಳು ಶಿಕ್ಷಕರಿಗೆ ವಿವಿಧ ಸ್ಪರ್ಧೆ ಮತ್ತು ಕಾರ್ಯಕ್ರಮ ಮಾಡುವ
ಮೂಲಕ ಆಚರಣೆಯನ್ನು ಮಾಡಿದರು ಕಾರ್ಯಕ್ರಮದಲ್ಲಿ ಶಾಲಾ ಸಿಬ್ಬಂದಿ ವರ್ಗದವರು ಪಾಲ್ಗೊಂಡಿದ್ದರು.