ಅಂತೂ ಇಂತೂ ಬಂತು ಸಿಗ್ನಲ್ ಲೈಟ್
ಬಾಗಲಕೋಟೆ ಜಿಲ್ಲೆಯ ಇಳಕಲ್ ನಗರದ ಜನರ ಬಹುದಿನಗಳ ಬೇಡಿಕೆಯಾಗಿದ್ದ ಸಿಗ್ನಲ್ ಲೈಟುಗಳ ಜೋಡಣೆಯನ್ನು ಹೆದ್ದಾರಿ ಪ್ರಾಧಿಕಾರ ಕಾರ್ಯವನ್ನು ನಡೆಸಿದೆ.
ಬಸವೇಶ್ವರ ಸರ್ಕಲ್ ಬಳಿ ಮೇಲಿಂದ ಮೇಲೆ ಅಪಘಾತಗಳು ನಡೆಯುತ್ತಿದ್ದ ಹಿನ್ನೆಲೆಯಲ್ಲಿ ಇಲ್ಲಿ ಅವಶ್ಯವಾಗಿ ಬೇಕಾಗಿದ್ದ ಸಿಗ್ನಲ್ ಲೈಟುಗಳಿಂದಾಗಿ ರಾಷ್ಟ್ರೀಯ ಹೆದ್ದಾರಿ ೫೦ ರಲ್ಲಿ ಸಿಗ್ನಲ್ ಲೈಟುಗಳನ್ನು ಜೋಡಿಸಿ ಪ್ರಯಾಣಿಕರಿಗೆ ಅನುಕೂಲ ಕಲ್ಪಿಸಿಕೊಡಲಾಗಿದೆ.
ಈ ಬಗ್ಗೆ ಶಾಸಕ ವಿಜಯಾನಂದ ಕಾಶಪ್ಪನವರ ಸಹ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಜೊತೆಗೆ ಈ ಬಗ್ಗೆ ಚರ್ಚಿಸಿದ್ದನ್ನು ಸ್ಮರಿಸಬಹುದು. ಲೈಟುಗಳ ಜೋಡಣೆಯ ಕಾರ್ಯ ಭರದಿಂದ ಸಾಗುತ್ತಿದೆ.
ವರದಿ : ಭೀಮಣ್ಣ ಗಾಣಿಗೇರ ಇಳಕಲ್ಲ ವಿಡಿಯೋ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ