ಹೊಲದಲ್ಲಿ ಎಡೆ ಒಡೆಯುತ್ತಿದ್ದಾಗ ವಿದ್ಯುತ್ ತಂತಿ ಸ್ಪರ್ಶಿಸಿ : ರೈತ ಮತ್ತು ಎತ್ತು ಸಾವು
ಹೊಲದಲ್ಲಿ ಎಡೆ ಒಡೆಯುತ್ತಿದ್ದಾಗ ವಿದ್ಯುತ್ ತಂತಿ ಸ್ಪರ್ಶಿಸಿ ರೈತನಿಗೆ ಮತ್ತು ಎತ್ತು ವಿದ್ಯುತ್ ತಗಲಿ ಸಾವನ್ನಪ್ಪಿದ ಘಟನೆ ರವಿವಾರದಂದು ನಡೆದಿದೆ.
ತಾವರಗೇರಾ ಸಮೀಪದ ಚಿಕ್ಕತೆಮ್ಮಿನಾಳ ಗ್ರಾಮದಲ್ಲಿ ಘಟನೆ ಜರುಗಿದೆ. ಮೃತ ರೈತ ಬಸವರಾಜ ಸಾಸಲಮರಿ (೩೮) ಎಂದು ಗುರುತಿಸಲಾಗಿದೆ.
ಹೊಲದಲ್ಲಿ ಎಡೆ ಒಡೆಯುತ್ತಿದ್ದಾಗ ವಿದ್ಯುತ್ ತಂತಿ ಸ್ಪರ್ಶಿಸಿ ಈ ಘಟನೆ ನಡೆದಿದ್ದು ಸ್ಥಳಕ್ಕೆ ಪೊಲೀಸ್ ಇಲಾಖೆಯವರು ಹಾಗೂ ಕೆಇಬಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸ್ಥಳಕ್ಕೆ ಶಾಸಕ ದೊಡ್ಡನಗೌಡ ಪಾಟೀಲ್ ಭೇಟಿ ನೀಡಿ, ಕುಟುಂಬ ವರ್ಗದವರಿಗೆ ಸಾಂತ್ವನ ತಿಳಿಸಿದರು.